ETV Bharat / state

ಬೆಳಗಾವಿ: 'ಶೌರ್ಯ ಪ್ರಶಸ್ತಿ' ಪುರಸ್ಕೃತ ನಿವೃತ್ತ ಸೇನಾಧಿಕಾರಿಗೆ ಭರ್ಜರಿ ಸ್ವಾಗತ - ಲೆಫ್ಟಿನೆಂಟ್ ಬಸಪ್ಪ ಮುಗಳಿಹಾಳರನ್ನು ಸ್ವಾಗತಿಸಿದ ಗ್ರಾಮಸ್ಥರು

ಭಾರತೀಯ ಸೇನೆಯಲ್ಲಿ ಐತಿಹಾಸಿಕ ಮರಾಠ ಲಘು ಪದಾತಿದಳದಲ್ಲಿ ಸೈನಿಕರಾಗಿ ಸೇವೆ ಸಲ್ಲಿಸಿ, ಕಾರ್ಗಿಲ್ ಯುದ್ಧದಲ್ಲೂ ಭಾಗಿಯಾಗಿ ದೇಶಕ್ಕೆ ವಿಜಯ ತಂದುಕೊಟ್ಟ ವೀರ ಯೋಧರ ಪೈಕಿ ಇವರೂ ಒಬ್ಬರು. ಇವರ ಸಾಧ‌ನೆಗೆ ಭಾರತ ಸರ್ಕಾರ ಶೌರ್ಯ ಚಕ್ರ ನೀಡಿ ಗೌರವಿಸಿದೆ. ಇಂದು ಸೇವಾ ನಿವೃತ್ತಿ ಹೊಂದಿ ತಾಯ್ನಾಡಿಗೆ ಮರಳಿದ ಯೋಧನಿಗೆ ಜನರು, ಜನಪ್ರತಿನಿಧಿಗಳು ಆತ್ಮೀಯ ಸ್ವಾಗತ ನೀಡಿದರು.

ಸೇವಾ ನಿವೃತ್ತಿ ಹೊಂದಿದ ಶೌರ್ಯ ಪ್ರಶಸ್ತಿ ಪುರಸ್ಕೃತ ಸೇನಾಧಿಕಾರಿಗೆ ಭರ್ಜರಿ ಸ್ವಾಗತ

author img

By

Published : Mar 3, 2022, 8:36 PM IST

ಬೆಳಗಾವಿ: ಕುಂದಾನಗರಿ ಬೆಳಗಾವಿಗೆ ಸೇವಾ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ವೀರಯೋಧ ಗೌರವ ಲೆಫ್ಟಿನೆಂಟ್ ಬಸಪ್ಪ ರಾಚಪ್ಪ ಮುಗಳಿಹಾಳ ಅವರನ್ನು ಕುಟುಂಬಸ್ಥರು ಹಾಗೂ ಸಾರ್ವಜನಿಕರು ಅದ್ಧೂರಿಯಾಗಿ ಬರಮಾಡಿಕೊಂಡರು.

ಉತ್ತರಾಖಂಡದ ಡೆಹ್ರಾಡೂನ್‌ನಿಂದ ಬೆಳಗಾವಿ ರೈಲ್ವೆ ನಿಲ್ದಾಣಕ್ಕೆ ಬಂದಿದ್ದ ಬಸಪ್ಪ ಮುಗಳಿಹಾಳ ರೈಲ್ವೆ ನಿಲ್ದಾಣದಲ್ಲಿ ನೆರೆದ ಜನರನ್ನು ನೋಡಿ ಅರೆಕ್ಷಣ ಭಾವುಕರಾದರು. ‌

ಬಸಪ್ಪ ರಾಚಪ್ಪ ಮುಗಳಿಹಾಳ 28 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿ ಇಂದು ಬೆಳಗಾವಿಗೆ ಮರಳಿದರು. ಡೆಹ್ರಾಡೂನ್​ನಿಂದ ತಾಯ್ನಾಡಿಗೆ ವಾಪಸ್ ಆದ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ತೆರೆದ ವಾಹನದಲ್ಲಿ ಅದ್ಧೂರಿ ಮೆರವಣಿಗೆಯ ಮೂಲಕ ಕರೆತರಲಾಯಿತು. ಇದೇ ವೇಳೆ ಬೆಳಗಾವಿ ಬಿಜೆಪಿ ಸಂಸದೆ ಮಂಗಲಾ ಅಂಗಡಿ ಹೂಗುಚ್ಛ ನೀಡಿ ಸ್ವಾಗತಿಸಿದರು. ಬಳಿಕ ಚನ್ನಮ್ಮ ವೃತ್ತದಿಂದ ಅಶೋಕ ವೃತ್ತದ ಮಾರ್ಗವಾಗಿ ಬೆಳಗಾವಿ ಹೊರವಲಯ ಕಣಬರಗಿ ಬಳಿ ಸಂಕಲ್ಪ ಗಾರ್ಡನ್‌ನಲ್ಲಿ ಅದ್ಧೂರಿ ಸನ್ಮಾನ ಸಮಾರಂಭದ ವೇದಿಕೆಗೆ ಆಗಮಿಸಿದರು.

ಇದನ್ನೂ ಓದಿ: 10 ದಿನಗಳ ಕಾಲ ಆಗುಂಬೆ ಘಾಟ್​ ಬಂದ್: ಪರ್ಯಾಯ ಮಾರ್ಗ ಹೀಗಿದೆ..

ಈ ಸಂದರ್ಭದಲ್ಲಿ ಮಾತನಾಡಿದ ಯೋಧ ಬಸಪ್ಪ ಮುಗಳಿಹಾಳ, 28 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ ಈ ದೇಹ ಮಾತ್ರ ನಿವೃತ್ತಿ ಆಗಿದೆ. ಆದ್ರೆ ನನ್ನ ರಕ್ತದ ಕಣಕಣದಲ್ಲೂ ದೇಶಭಕ್ತಿ ಇದೆ. ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಉಗ್ರರ ಜೊತೆ ಕಾಳಗದ ವೇಳೆ ಉಗ್ರನ ಗನ್ ವಶಕ್ಕೆ ಪಡೆದು ಆತನ ಸದೆಬಡಿದಿದ್ದೆ. ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ನನಗೆ ಅಂದಿನ ರಾಷ್ಟ್ರಪತಿ ಕೆ.ಆರ್.ನಾರಾಯಣನ್, ರಕ್ಷಣಾ ಸಚಿವ ಜಾರ್ಜ್ ಫರ್ನಾಂಡೀಸ್ ಶೌರ್ಯ ಚಕ್ರ ನೀಡಿ ಗೌರವಿಸಿದ್ದರು. ಇಷ್ಟೊಂದು ಜನ ನನ್ನ ಸ್ವಾಗತಿಸಿರುವುದನ್ನು ನೋಡಿ ತುಂಬಾ ಸಂತಸವಾಗುತ್ತಿದೆ. ಯುವಕರು ಸೇನೆ ಸೇರಲು ಮುಂದೆ ಬರಬೇಕು ಎಂದು ಕರೆ ನೀಡಿದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.