ಬೆಳಗಾವಿ: ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಗೋಕಾಕ್ ತಾಲೂಕಿನ ಮಮದಾಪುರ ಕ್ರಾಸ್ ಬಳಿ ನಡೆದಿದೆ.
ರಾಮದುರ್ಗ ತಾಲೂಕಿನ ಮುರಕಟನಾಳ ಗ್ರಾಮದ ಹನುಮಂತ ಪರಕನಟ್ಟಿ ಸೇರಿ ಇಬ್ಬರು ಮಹಿಳೆಯರು ಹಾಗೂ ನಾಲ್ಕು ವರ್ಷದ ಬಾಲಕಿ ಮೃತಪಟ್ಟಿದ್ದಾರೆ.
ಸಂಕೇಶ್ವರ-ಸವದತ್ತಿ ರಾಜ್ಯ ಹೆದ್ದಾರಿಯಲ್ಲಿ ಟಾಟಾ ಏಸ್ ಹಾಗೂ ಇಂಡಿಕಾ ಕಾರು ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಟಾಟಾ ಏಸ್ ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.