ETV Bharat / state

ಗೋಕಾಕ್ ಫಾಲ್ಸ್ ಗೆ ಬೆಳಗಾವಿ ಎಸ್ಪಿ ಡಾ.ಸಂಜೀವ್ ಪಾಟೀಲ ಭೇಟಿ : ಭದ್ರತೆ ಪರಿಶೀಲನೆ - Gokak Falls Belgaum

ಗೋಕಾಕ್ ಫಾಲ್ಸ್ ನಲ್ಲಿ ಪ್ರವಾಸಿಗರ ಸುರಕ್ಷತೆಯ ಬಗ್ಗೆ ಎಚ್ಚೆತ್ತುಕೊಂಡ ಜಿಲ್ಲಾಡಳಿತ -ಬೆಳಗಾವಿ ಎಸ್ಪಿ ಡಾ.ಸಂಜೀವ್ ಪಾಟೀಲ ಸ್ಥಳಕ್ಕೆ ಭೇಟಿ, ಪರಿಶೀಲನೆ

belagavi-sp-dr-sanjeev-patil-visit-to-gokak-falls
ಗೋಕಾಕ್ ಫಾಲ್ಸ್ ಗೆ ಬೆಳಗಾವಿ ಎಸ್ಪಿ ಡಾ.ಸಂಜೀವ್ ಪಾಟೀಲ ಭೇಟಿ : ಭದ್ರತೆ ಪರಿಶೀಲನೆ
author img

By

Published : Jul 10, 2022, 7:28 PM IST

ಬೆಳಗಾವಿ : ಗೋಕಾಕ್ ಫಾಲ್ಸ್‌ನಲ್ಲಿ ಪ್ರವಾಸಿಗರ ಸುರಕ್ಷತೆಯ ಬಗ್ಗೆ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಗೋಕಾಕ್ ಫಾಲ್ಸ್ ಗೆ ಎಸ್ಪಿ ಡಾ.ಸಂಜೀವ್ ಪಾಟೀಲ ಭೇಟಿ ನೀಡಿ ಭದ್ರತೆ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಜಲಪಾತದ ಎತ್ತರದಲ್ಲಿ ನಿಂತಿದ್ದ ಪ್ರವಾಸಿಗರನ್ನು ಪೊಲೀಸರು ವಾಪಸ್ ಕಳುಹಿಸಿದರು‌. ಜಲಪಾತದ ತುದಿಗೆ ತೆರಳದಂತೆ ಪ್ರವಾಸಿಗರಿಗೆ ಎಚ್ಚರಿಕೆ ನೀಡಿದ್ದು, ಬಂಡೆಗಳ ಮೇಲೆ ನಿಂತು ಪೋಟೋ ತೆಗೆಯದಂತೆ ಸೂಚನೆ ನೀಡಿದರು. ಇದೇ ವೇಳೆ ಗೋಕಾಕ್​ ಗ್ರಾಮೀಣ ಠಾಣೆ ಪೊಲೀಸರಿಗೆ ಅಗತ್ಯ ಭದ್ರತೆ ಕೈಗೊಳ್ಳುವಂತೆ ಸೂಚಿಸಿದರು.

ಗೋಕಾಕ್ ಫಾಲ್ಸ್ ಗೆ ಬೆಳಗಾವಿ ಎಸ್ಪಿ ಡಾ.ಸಂಜೀವ್ ಪಾಟೀಲ ಭೇಟಿ : ಭದ್ರತೆ ಪರಿಶೀಲನೆ

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಎಸ್ಪಿ ಡಾ.ಸಂಜೀವ್ ಪಾಟೀಲ, ಪ್ರವಾಸಿಗರು ತುತ್ತತುದಿಗೆ ಹೋಗದಂತೆ ‌ಎಚ್ಚರಿಕೆ ನೀಡಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಕ್ರೈಂಸೀನ್ ಟೇಪ್ ಮತ್ತು ಬ್ಯಾರಿಕೇಡ್ ಅಳವಡಿಸಲಾಗಿದೆ. ಜಲಪಾತದ ಸಮೀಪ ಹೋಗದಂತೆ ಕ್ರಮ ಕೈಗೊಳ್ಳಲಾಗಿದ್ದು, ಹೆಚ್ಚಿನ ಸುರಕ್ಷತೆಗೆ ಕಬ್ಬಿಣದ ಗ್ರಿಲ್ಸ್ ಅಳವಡಿಸುವಂತೆ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಪ್ರವಾಸಿಗರು ಸುರಕ್ಷತೆಗಳನ್ನು ಮೀರಿ ವರ್ತಿಸದೇ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಗೊಡಚಿನಮಲ್ಕಿ ಸೇರಿ ಇತರೆ ಜಲಪಾತಗಳಲ್ಲಿನ ಭದ್ರತೆಯ ಬಗ್ಗೆ ವರದಿಯನ್ನು ತರಿಸಿಕೊಳ್ಳುತ್ತೇನೆ. ಬೆಳಗಾವಿ ನೈಸರ್ಗಿಕವಾಗಿ ಸಂಪದ್ಭರಿತವಾಗಿದ್ದು, ಹಲವು ಪ್ರವಾಸಿ ತಾಣಗಳಿವೆ. ಪ್ರವಾಸಿಗರು, ಸ್ಥಳೀಯರು ಪೊಲೀಸರಿಗೆ ಸಹಕಾರ ನೀಡಬೇಕು. ಪ್ರಾಣಹಾನಿ, ಜೀವಹಾನಿ ಆಗದಂತೆ ವರ್ತನೆ ಇರಬೇಕು. ಪ್ರವಾಸೋದ್ಯಮ ಇಲಾಖೆ ಜೊತೆಗೆ ಸಮನ್ವಯ ಸಾಧಿಸಿ ಕಾರ್ಯ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಓದಿ : ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದೆ ಗೋಕಾಕ್ ಫಾಲ್ಸ್; ಫೋಟೋ ಕ್ಲಿಕ್ಕಿಸಲು ಪ್ರವಾಸಿಗರ ದುಸ್ಸಾಹಸ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.