ಬೆಳಗಾವಿ: ದೇಶಾದ್ಯಂತ ನಿನ್ನೆ ನಡೆದ ಮೆಗಾ ಲಸಿಕಾ ಮೇಳದಲ್ಲಿ ಇಡೀ ದೇಶದಲ್ಲಿಯೇ ಬೆಳಗಾವಿ ಜಿಲ್ಲೆಯು ಲಸಿಕೆ ವಿತರಣೆಯಲ್ಲಿ 2ನೇ ಸ್ಥಾನ ಗಳಿಸುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ ಡಿಸಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು 4,09,977 ಲಸಿಕೆ ನೀಡುವ ಮೂಲಕ ಪ್ರಥಮ ಸ್ಥಾನ ಪಡೆದಿದೆ. ಬೆಳಗಾವಿ ಜಿಲ್ಲೆಯಲ್ಲಿ ಸೆ.17 ರಂದು ಒಂದೇ ದಿನ 2,57,604 ಲಸಿಕೆ ನೀಡುವ ಮೂಲಕ ದ್ವಿತೀಯ ಸ್ಥಾನದಲ್ಲಿದೆ. ಬೆಳಗಾವಿಯು 3 ಲಕ್ಷ ಲಸಿಕೆ ನೀಡುವ ಗುರಿ ಹೊಂದಿತ್ತು. ನಿರೀಕ್ಷಿತ ಗುರಿ ಸಾಧನೆಯಾಗದಿದ್ದರೂ ಒಟ್ಟಾರೆ ಲಸಿಕೆ ಪ್ರಮಾಣದಲ್ಲಿ ಇಡೀ ದೇಶದಲ್ಲಿಯೇ ಅತೀ ಹೆಚ್ಚು ಲಸಿಕೆ ನೀಡುವುದರಲ್ಲಿ ದ್ವಿತೀಯ ಸ್ಥಾನ ಗಳಿಸಿರುವುದು ಹೆಮ್ಮೆಯ ವಿಷಯ ಎಂದಿದ್ದಾರೆ.
![belagavi-was-the-2nd-most-vaccinated-city-in-the-country](https://etvbharatimages.akamaized.net/etvbharat/prod-images/kn-bgm-01-18-dc-praktane-ka10029_18092021110921_1809f_1631943561_504.jpg)
ಈ ಸಾಧನೆಗೆ ಶ್ರಮಿಸಿದ ಕಂದಾಯ, ಆರೋಗ್ಯ, ಗ್ರಾಮೀಣಾಭಿವೃದ್ಧಿ, ನಗರ ಸ್ಥಳೀಯ ಸಂಸ್ಥೆಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಜೊತೆಗೆ ಸಾರ್ವಜನಿಕರಿಗೂ ಕೃತಜ್ಞತೆ ಅರ್ಪಿಸಿದ್ದಾರೆ.
ಇದನ್ನೂ ಓದಿ: ನಿನ್ನೆ ಒಂದೇ ದಿನ ರಾಜ್ಯದಲ್ಲಿ 29.50 ಲಕ್ಷ ಲಸಿಕೆ ವಿತರಣೆ.. ದೇಶದಲ್ಲೇ ಅತೀ ಹೆಚ್ಚು ವ್ಯಾಕ್ಸಿನ್ ನೀಡಿದ ಕರ್ನಾಟಕ