ಬೆಳಗಾವಿ : ಲೋಕಸಭೆ ಉಪಚುನಾವಣೆ ಹಿನ್ನೆಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಇಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಮಹತ್ವದ ಸಭೆ ನಡೆಯುತ್ತಿದೆ.
ಸಚಿವರಾದ ಜಗದೀಶ್ ಶೆಟ್ಟರ್, ಉಮೇಶ್ ಕತ್ತಿ, ಶಶಿಕಲಾ ಜೊಲ್ಲೆ, ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ, ಸಂಸದ ಅಣ್ಣಾಸಾಹೇಬ್ ಜೊಲ್ಲೆ ಸೇರಿ ಬೆಳಗಾವಿ ಕ್ಷೇತ್ರದ ಎಲ್ಲ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಮಂಗಳ ಅಂಗಡಿ ಕೂಡ ಉಪಸ್ಥಿತರಿದ್ದಾರೆ. ಚುನಾವಣೆ ಕಾರ್ಯತಂತ್ರ ಬಗ್ಗೆ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಗುತ್ತಿದೆ.
ದಾಖಲೆ ಮೊತ್ತದ ಅಂತರದ ಗೆಲುವಿಗೆ ಶ್ರಮಿಸಿ : ಬೆಳಗಾವಿ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳ ಅಂಗಡಿ ದಾಖಲೆ ಮತಗಳಿಂದ ಗೆಲುವು ಸಾಧಿಸಬೇಕು. ಈ ನಿಟ್ಟಿನಲ್ಲಿ ಶಾಸಕರ ಪಾತ್ರವೂ ಮಹತ್ವದ್ದಾಗಿದೆ. ಬಿಜೆಪಿ ಶಾಸಕರು ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಆಗ ಮಾತ್ರ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಸಾಧ್ಯ ಎಂದು ಕಿವಿಮಾತು ಹೇಳಿದರು.