ಬೆಳಗಾವಿ : ವಿಧಾನಪರಿಷತ್ ಚುನಾವಣೆ ಡಿಸೆಂಬರ್ 10ರಂದು ನಡೆಯಲಿದೆ. ಡಿಸೆಂಬರ್ 16ರವರೆಗೆ ಸದಾಚಾರ ನೀತಿ ಸಂಹಿತೆ (Code of Conduct) ಜಾರಿಯಲ್ಲಿರುವ ಹಿನ್ನೆಲೆ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ (weapons surrender notice)ಗಳನ್ನು ಹತ್ತಿರದ ಪೊಲೀಸ್ ಠಾಣೆಯಲ್ಲಿ ಜಮಾ ಮಾಡುವಂತೆ ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್ (DC Venkatesh kumar) ಸೂಚನೆ ನೀಡಿದ್ದಾರೆ.
ಚುನಾವಣೆಯ ಸಮಯದಲ್ಲಿ ಆಯುಧ ಲೈಸೆನ್ಸುದಾರರು ಆಯುಧಗಳೊಂದಿಗೆ ಓಡಾಡುವುದರಿಂದ ಶಾಂತಿಭಂಗ ಆಗಬಹುದು ಅಥವಾ ಲೈಸೆನ್ಸುದಾರರು ಆಯುಧಗಳನ್ನು ದುರುಪಯೋಗ ಮಾಡುವ ಸಾಧ್ಯತೆಗಳಿರುತ್ತವೆ. ಚುನಾವಣೆಯ ಸಮಯದಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಆದೇಶವನ್ನು ಹೊರಡಿಸಲಾಗಿದೆ.
ರಾಷ್ಟ್ರೀಕೃತ ಅಥವಾ ಸಂಸ್ಥೆಯ ಬ್ಯಾಂಕ್ಗಳಿಗೆ, ಸೆಕ್ಯುರಿಟಿ ಏಜೆನ್ಸಿಗಳು, ಯಾವುದೇ ಸಂಸ್ಥೆಗಳಿಗೆ ಸೆಕ್ಯೂರಿಟಿ ಸೇವೆಗಳನ್ನು ನೀಡುವ ಗಾರ್ಡ್ಗಳು, ಖಾಸಗಿ ಗನ್‌ಮ್ಯಾನ್‌ಗಳು, ಶಸ್ತ್ರಾಸ್ತ್ರ ಜಮಾ ಮಾಡುವುದರಿಂದ ವಿನಾಯಿತಿಯನ್ನು ಪಡೆದುಕೊಳ್ಳಬಹುದು. ಸದರಿ ಆದೇಶ ಉಲ್ಲಂಘಿಸಿದವರನ್ನು ಭಾರತೀಯ ಶಸ್ತ್ರಾಸ್ತ್ರಗಳ ಕಾಯ್ದೆ 1959ರಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಓದಿ: ಹೈಕೋರ್ಟ್ ತಳಮಹಡಿ ಕಚೇರಿ ಸ್ಥಳಾಂತರಕ್ಕೆ KGID ಕಟ್ಟಡ ನೀಡುವಂತೆ ಸರ್ಕಾರಕ್ಕೆ ಮನವಿ