ಬೆಳಗಾವಿ: ಮಹಾರಾಷ್ಟ್ರದಿಂದ ಬಂದಿದ್ದ 8 ವರ್ಷದ ಬಾಲಕ ಸೇರಿ ನಾಲ್ವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 316ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರದಿಂದ ಬಂದಿದ್ದ 8 ವರ್ಷದ ಬಾಲಕ, 29 ವರ್ಷದ ಮಹಿಳೆ, 32 ವರ್ಷದ ಮಹಿಳೆ, 30 ವರ್ಷದ ಮಹಿಳೆಗೆ ಕೊರೊನಾ ಸೋಂಕು ತಗುಲಿದೆ.
ಈ ಎಲ್ಲಾ ಸೋಂಕಿತರನ್ನು ಜಿಲ್ಲಾಡಳಿತ ಕೋವಿಡ್ ವಾರ್ಡ್ಗೆ ಶಿಫ್ಟ್ ಮಾಡಿದೆ. ಮತ್ತೊಂದೆಡೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿಯ ಆರು ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 20 ಕೊರೊನಾ ಆ್ಯಕ್ಟೀವ್ ಕೇಸ್ಗಳಿವೆ.