ETV Bharat / state

ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿ ನಡೆದುಕೊಂಡರೇ ಪ್ರತ್ಯುತ್ತರಕ್ಕೆ ನಾವೂ ಸಿದ್ಧ: ಠಾಕ್ರೆಗೆ ಸಚಿವ ಜಾರಕಿಹೊಳಿ ಟಾಂಗ್​

ಮಹಾರಾಷ್ಟ್ರ ಸರ್ಕಾರವು ಗಡಿ ಭಾಗದ ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುವುದು ಸರಿಯಲ್ಲ ಎಂದು ಸಚಿವ ರಮೇಶ್​ ಜಾರಕಿಹೊಳಿ ಹೇಳಿದ್ದಾರೆ. ಅಲ್ಲದೆ, ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿ ನಡೆದುಕೊಂಡರೆ ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಲು ನಾವೂ ಸಿದ್ಧ ಎನ್ನುವ ಮೂಲಕ ಉದ್ಧವ್​ ಠಾಕ್ರೆಗೆ ಖಡಕ್​ ಸಂದೇಶ ರವಾನಿಸಿದ್ದಾರೆ.

Ramesh Jarkiholi
ರಮೇಶ್ ಜಾರಕಿಹೊಳಿ
author img

By

Published : Jan 18, 2021, 12:13 PM IST

ಬೆಳಗಾವಿ: ಬೆಳಗಾವಿ ವಿಷಯದಲ್ಲಿ ಮಹಾರಾಷ್ಟ್ರ ಸರ್ಕಾರ ಅನಗತ್ಯ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಬೆಳಗಾವಿ ಯಾವತ್ತಿದ್ದರೂ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್​ ಜಾರಕಿಹೊಳಿ‌ ‌ಹೇಳಿದ್ದಾರೆ.

ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಮಹಾಜನ್ ವರದಿಯನ್ನು ಈಗಾಗಲೇ ಒಪ್ಪಿಕೊಂಡಾಗಿದೆ. ಮಹಾರಾಷ್ಟ್ರ ಸರ್ಕಾರವು ಗಡಿ ಭಾಗದ ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುವುದು ಸರಿಯಲ್ಲ. ಮಹಾರಾಷ್ಟ್ರ ಸರ್ಕಾರ ತನ್ನ ವೈಫಲ್ಯ ಮರೆಮಾಚಿಕೊಳ್ಳಲು ಗಡಿ ವಿಷಯ ಪ್ರಸ್ತಾಪಿಸಿ ಜನರ ಭಾವನೆ ಕೆರಳಿಸುವ ಯತ್ನ ಮಾಡುವುದನ್ನು ನಿಲ್ಲಿಸಬೇಕು. ರಾಜ್ಯದ ಒಂದಿಂಚೂ ಜಾಗ ಬಿಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರ ಮುಖ್ಯಮಂತ್ರಿಯ ಉದ್ಧಟತನದ ಹೇಳಿಕೆಯನ್ನು ನಾನು ಖಂಡಿಸುತ್ತೇನೆ ಎಂದಿದ್ದಾರೆ.

ಓದಿ...ಗಡಿ ವಿಚಾರದಲ್ಲಿ ಮಹಾಜನ್ ವರದಿ ಅಂತಿಮ,‌ ಉದ್ಧವ್ ಹೇಳಿಕೆ ಒಕ್ಕೂಟ ವ್ಯವಸ್ಥೆಗೆ ವಿರುದ್ಧ.. ಸಿಎಂ ಬಿಎಸ್​​ವೈ

ಕನ್ನಡ ನಾಡಿನ ನೆಲ, ಜಲ ಮತ್ತು ಭಾಷೆಯ ರಕ್ಷಣೆಗೆ ನಾವು ಕಟಿಬದ್ಧರಾಗಿದ್ದೇವೆ. ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿ ನಡೆದುಕೊಂಡರೇ ಪ್ರತ್ಯುತ್ತರ ನೀಡಲು ನಾವೂ ಸಿದ್ಧ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಹೇಳಿಕೆ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.