ETV Bharat / state

ಪ್ರವಾಹ ಎದುರಿಸಲು ಬೆಳಗಾವಿ ಸನ್ನದ್ದ: ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ

ಪ್ರವಾಹದ ಮುಂಜಾಗ್ರತೆಗಾಗಿ ನಾವು ಮಹಾರಾಷ್ಟ್ರದ ಸತಾರ ಜಿಲ್ಲಾಧಿಕಾರಿ ಜೊತೆಗೆ ಸಂಪರ್ಕದಲ್ಲಿದ್ದು, ಕ್ಷಣ ಕ್ಷಣದ ಮಾಹಿತಿ ಪಡೆದುಕೊಳ್ಳುತಿದ್ದೇವೆ‌. ಪ್ರವಾಹವನ್ನು ಎದುರಿಸಲು ಜಿಲ್ಲಾಡಳಿತ ಸನ್ನದ್ದವಾಗಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದ್ದಾರೆ.

ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ
ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ
author img

By

Published : Aug 18, 2020, 8:29 PM IST

Updated : Aug 18, 2020, 9:50 PM IST

ಚಿಕ್ಕೋಡಿ: ಪ್ರವಾಹಕ್ಕೆ ಮುಂಜಾಗ್ರತೆಯಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ನದಿ ತೀರದ ಜನರು ಯಾವುದೇ ಭಯ ಪಡುವ ಅಗತ್ಯ ಇಲ್ಲ. ಎಲ್ಲರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲು ಸಿದ್ಧತೆಯನ್ನು ಜಿಲ್ಲಾಡಳಿತ ಮಾಡಿಕೊಂಡಿದೆ. ಪ್ರವಾಹ ಎದುರಿಸಲು ಜಿಲ್ಲಾಡಳಿತ ಸನ್ನದ್ದವಾಗಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದ್ದಾರೆ.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ

ಚಿಕ್ಕೋಡಿ ಉಪವಿಭಾಗದ ಅಧಿಕಾರಿಗಳ ಸಭೆ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಪ್ರವಾಹದ ಮುಂಜಾಗ್ರತೆಗಾಗಿ ನಾವು ಮಹಾರಾಷ್ಟ್ರದ ಸತಾರ ಜಿಲ್ಲಾಧಿಕಾರಿ ಜೊತೆಗೆ ಸಂಪರ್ಕದಲ್ಲಿದ್ದು, ಕ್ಷಣ ಕ್ಷಣದ ಮಾಹಿತಿ ಪಡೆದುಕೊಳ್ಳುತಿದ್ದೇವೆ‌. ಇಂದು‌ ಕೊಯ್ನಾ ಜಲಾಶಯದಿಂದ 56 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ. ಚಿಕ್ಕೋಡಿ ತಾಲೂಕಿನ ಕಲ್ಳೊಳ ಬಳಿ ಕೃಷ್ಣಾ ನದಿಗೆ 1 ಲಕ್ಷ 81 ಸಾವಿರ ಕ್ಯೂಸೆಕ್​​ ನೀರು ಬಿಡಲಾಗಿದೆ ಎಂದರು.

ಚಿಕ್ಕೋಡಿಯಲ್ಲಿ ಒಂದು ಎನ್‌ಡಿಆರ್‌ಎಫ್ ತಂಡ ಇದೆ. ಗೋಕಾಕನಲ್ಲಿ ಒಂದು ಎನ್‌ಡಿಆರ್‌ಎಫ್ ತಂಡ ಇದೆ. ರಾಮದರ್ಗ ತಾಲೂಕಿನಲ್ಲಿ ಸುಮಾರು 100 ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ. ಕಳೆದ ವರ್ಷದ ಪ್ರವಾಹ ಅನುಭವ ಇದೆ. ಆ ಕಾರಣಕ್ಕೆ ಯಾವುದೇ ರೀತಿಯ ತೊಂದರೆ ಇಲ್ಲಾ. ಮುಂಜಾಗ್ರತವಾಗಿ ಜಿಲ್ಲಾ ಆಡಳಿತ ಸಕಲ ಸಿದ್ದತೆ ಮಾಡಿಕೊಂಡಿದೆ. ನದಿತೀರದ ಜನರು ಯಾವುದೇ ಭಯ ಪಡೆಯುವ ಅಗತ್ಯ ಇಲ್ಲ ಎಂದರು.

Last Updated : Aug 18, 2020, 9:50 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.