ಬೆಳಗಾವಿ: ನಾಳೆ ನಡೆಯಲಿರುವ ಬೆಳಗಾವಿ ಲೋಕಸಭಾ ಉಪಚುನಾವಣೆಯ ಮತದಾನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಮತಗಟ್ಟೆ ಸಿಬ್ಬಂದಿ ಮತಯಂತ್ರಗಳು ಹಾಗೂ ಚುನಾವಣಾ ಸಾಮಗ್ರಿಗಳೊಂದಿಗೆ ಮತಗಟ್ಟೆಗಳತ್ತ ಪ್ರಯಾಣ ಬೆಳೆಸಿದ್ದಾರೆ.
ನಗರದ ಬಿ.ಕೆ.ಮಾಡೆಲ್ ಸ್ಕೂಲ್, ವನಿತಾ ವಿದ್ಯಾಲಯದ ಮೈದಾನಕ್ಕೆ ವಿವಿಧ ತಾಲೂಕುಗಳಿಂದ ಆಗಮಿಸಿದ ಸಿಬ್ಬಂದಿ ಪೊಲೀಸ್ ಭದ್ರತೆಯೊಂದಿಗೆ ಬಸ್ ಕರ್ತವ್ಯಕ್ಕೆ ತೆರಳಿದ್ದಾರೆ. ಇತ್ತ ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿಯಲ್ಲಿ ಹಲವು ಮಹಿಳೆಯರು ತಮ್ಮ ಪುಟ್ಟ ಮಕ್ಕಳೊಂದಿಗೆ ಆಗಮಿಸಿದ್ದರು.
ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಮತ ಕೇಂದ್ರದಲ್ಲಿ ಸಿಬ್ಬಂದಿಗೆ ಸರ್ಕಾರಿ ಸಾರಿಗೆ ಬಸ್, ಖಾಸಗಿ ಬಸ್ ಸೇರಿದಂತೆ ಒಟ್ಟು 300 ವಾಹನಗಳ ವ್ಯವಸ್ಥೆ ಮಾಡಲಾಗಿತ್ತು. 2,566 ಮತಗಟ್ಟೆ ಕೇಂದ್ರಗಳನ್ನು ತೆರೆಯಲಾಗಿದೆ. ಚುನಾವಣಾ ಕರ್ತವ್ಯಕ್ಕೆ 11,290 ಜನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.