ಬೆಳಗಾವಿ: ಫೆ. 2ರಿಂದ ಬೆಳಗಾವಿ-ಚೆನ್ನೈ ನಡುವೆ ನೇರ ವಿಮಾನ ಸೇವೆ ಆರಂಭವಾಗಲಿದೆ ಎಂದು ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದ ನಿರ್ದೇಶಕ ರಾಜೇಶ್ ಕುಮಾರ್ ಮೌರ್ಯ ಮಾಹಿತಿ ನೀಡಿದ್ದಾರೆ.
ಇಂಡಿಗೋ ವಿಮಾನಯಾನ ಸಂಸ್ಥೆಯು ವಾರದಲ್ಲಿ ಮೂರು ದಿನ ಕಾರ್ಯಾಚರಣೆ ನಡೆಸಲಿದೆ. ಪ್ರತಿ ಮಂಗಳವಾರ, ಗುರುವಾರ ಹಾಗೂ ಶನಿವಾರ ಪ್ರಯಾಣಿಕರಿಗೆ ವಿಮಾನ ಸೇವೆ ಸಿಗಲಿದೆ. ಬೆಳಗ್ಗೆ 10.15ಕ್ಕೆ ಇಲ್ಲಿಗೆ ಬರುವ ವಿಮಾನ 10.55ಕ್ಕೆ ಚೆನ್ನೈಗೆ ತೆರಳಲಿದೆ.
ಓದಿ: ಕೋವಿಡ್ ಲಸಿಕೆ ಬಗ್ಗೆ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮಹತ್ವದ ಸಭೆ
ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆ ಕೂಡ ಈ ಹಿಂದೆ ಈ ಮಾರ್ಗದಲ್ಲಿ ಕಾರ್ಯಾಚರಣೆ ನಡೆಸುತ್ತಿತ್ತು. ಬಳಿಕ ಅದು ತನ್ನ ಸೇವೆಯನ್ನು ಸ್ಥಗಿತಗೊಳಿಸಿತ್ತು. ಬೆಳಗಾವಿಯಿಂದ ಮೈಸೂರು ಮಾರ್ಗವಾಗಿ ಚೆನ್ನೈಗೆ ಒಂದು ವಿಮಾನ ಸೇವೆ ಇದೆ. ಆದರೆ ಮುಂದಿನ ತಿಂಗಳು ನೇರ ವಿಮಾನ ಸೇವೆ ಆರಂಭವಾಗಲಿದೆ.