ಬೆಳಗಾವಿ : ಅನಾರೋಗ್ಯದಿಂದ ಪುಣೆಯ ಮಿಲಿಟರಿ ಆಸ್ಪತ್ರೆಗೆ ದಾಖಲಾಗಿದ್ದ ಬೆಳಗಾವಿ ಯೋಧ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಜಿಲ್ಲೆಯ ಮೂಡಲಗಿ ತಾಲೂಕಿನ ವಡೆರಹಟ್ಟಿ ಗ್ರಾಮದ ಭೀಮಶಿ ಗಿಡೋಜಿ ಮೃತ ಯೋಧ. ಕಳೆದ 17 ವರ್ಷಗಳಿಂದ ಸೇನೆಯಲ್ಲಿದ್ದ ಇವರು ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಸೇನಾ ಸಿಬ್ಬಂದಿ ಭೀಮಶಿ ಅವರನ್ನು ಪುಣೆಯ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಿಸದೇ ನಿನ್ನೆ ಯೋಧ ಭೀಮಶಿ ಮೃತಪಟ್ಟಿದ್ದರು.
ಇಂದು ಬೆಳಗ್ಗೆ ಯೋಧನ ಕಳೆಬರ ಗ್ರಾಮಕ್ಕೆ ಆಗಮಿಸಿತು. ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅನುಕೂಲ ಮಾಡಿಕೊಡಲಾಗಿತ್ತು. ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಜಿಲ್ಲಾಡಳಿತ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿತ್ತು.