ಬೆಳಗಾವಿ: ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷ ಮತ್ತು ಶಿವಸೇನೆ ಸಂಸದ ಧೈರ್ಯಶೀಲ ಮಾನೆ ಅವರು ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶ CRPC 1973 ಕಲಂ 144(3)ರ ಅನ್ವಯ ನಿಷೇಧಿಸಿ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಸಂಸದ ಧೈರ್ಯಶೀಲ ಮಾನೆ, ನಾಳೆ(ಡಿಸೆಂಬರ್ 19) ನಡೆಯಲಿರುವ ಎಂಇಎಸ್ ಮಹಾಮೇಳಾವ್ಗೆ ಬರುತ್ತಿದ್ದು, ನನಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತರಿಗೆ ಪತ್ರ ರವಾನಿಸಿದ್ದರು. ಬೆಳಗಾವಿಯಲ್ಲಿ ರಾಜ್ಯದ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವುದು ಅಗತ್ಯವಿದೆ. ಹೀಗಾಗಿ ಸಂಸದ ಧೈರ್ಯಶೀಲ ಮಾನೆ ಅವರು ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಿಸದಂತೆ ನಿರ್ಬಂಧಿಸಿ ಜಿಲ್ಲಾಧಿಕಾರಿ ತಡೆಯಾಜ್ಞೆ ಕ್ರಮ ಕೈಗೊಂಡಿದ್ದಾರೆ.
ಮಹಾರಾಷ್ಟ್ರದ ಸಂಸದ ಆಗಮನ ಹಿನ್ನೆಲೆ ಬೆಳಗಾವಿಯಲ್ಲಿ ಭಾಷಾ ವೈಷಮ್ಯ ಬೆಳೆದು ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಹೆಚ್ಚಿದೆ. ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಹಾಗೂ ಸಾರ್ವಜನಿಕರ ನೆಮ್ಮದಿ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂಓದಿ:ಬೆಳಗಾವಿಗೆ ಭೇಟಿ ನೀಡುವುದಾಗಿ ಶಿವಸೇನೆ ಸಂಸದ ಧೈರ್ಯಶೀಲ ಮಾನೆ ಪತ್ರ