ಬೆಳಗಾವಿ: ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಯಾವುದೇ ಪಾಸಿಟಿವ್ ಪ್ರಕರಣ ದಾಖಲಾಗದಿದ್ದರೂ ಜಿಲ್ಲಾಡಳಿತ ಇನ್ನೂ 94 ಶಂಕಿತರ ವರದಿ ನಿರೀಕ್ಷೆಯಲ್ಲಿದೆ.
ಜಿಲ್ಲೆಯಲ್ಲಿ ಈವರೆಗೆ 2135 ಜನರ ಮೇಲೆ ನಿಗಾ ಇಡಲಾಗಿದೆ. ಒಟ್ಟು 363 ಜನರಿಗೆ 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಹಾಗೂ 51 ಜನರಿಗೆ ನಗರದ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟು 708 ಜನರಿಗೆ 14 ದಿನಗಳ ಹೋಮ್ ಕ್ವಾರಂಟೈನ್ ಹಾಗೂ 1013 ಜನರು 28 ದಿನಗಳ ಹೋಮ್ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ್ದಾರೆ.
ಜಿಲ್ಲೆಯಿಂದ ಒಟ್ಟು 834 ಜನರ ಗಂಟಲು ದ್ರವವನ್ನು ಪ್ರಯೋಗಾಲಯಕ್ಕೆ ರವಾನಿಸಲಾಗಿದ್ದು, ಒಟ್ಟು 42 ಜನರಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಕೊರೊನಾಗೆ ಓರ್ವ ವೃದ್ಧೆ ಮೃತಪಟ್ಟಿದ್ದು, ಓರ್ವ ಸೋಂಕಿತ ವೃದ್ಧ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 698 ಜನರ ವರದಿ ನೆಗೆಟಿವ್ ಬಂದಿದ್ದು, 94 ಜನರ ವರದಿ ನಿರೀಕ್ಷೆಯಲ್ಲಿ ಜಿಲ್ಲಾಡಳಿತ ಇದೆ.