ETV Bharat / state

ಮಾದರಿ ನೀತಿ ಸಂಹಿತೆ ಪಾಲನೆಗೆ ಕ್ರಮ : ಬೆಳಗಾವಿ ಡಿಸಿ - ಬೆಳಗಾವಿ ಲೋಕಸಭಾ ಚುನಾವಣೆ

ಕೋವಿಡ್ ಹಿನ್ನೆಲೆ 80 ವರ್ಷ ಮೇಲ್ಪಟ್ಟವರು, ಕೋವಿಡ್ ಸೋಂಕಿತರು ಹಾಗೂ ವಿಕಲಚೇತನರಿಗೆ ಪೋಸ್ಟಲ್ ಬ್ಯಾಲೆಟ್ ಒದಗಿಸಲು ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಕ್ರಮಕೈಗೊಂಡು ಮತದಾರರ ಪಟ್ಟಿಯಲ್ಲಿ ಗುರುತು ಮಾಡಬೇಕು. ಅಕ್ರಮ ಮದ್ಯ ಮಾರಾಟ ಹಾಗೂ ಸಾಗಾಣಿಕೆ ಮೇಲೆ ಹೆಚ್ಚಿನ ನಿಗಾವಹಿಸಬೇಕು..

Belgavi DC held meeting of Nodal Officers
ನೋಡಲ್ ಅಧಿಕಾರಿಗಳ ಸಭೆ ನಡೆಸಿದ ಬೆಳಗಾವಿ ಡಿಸಿ
author img

By

Published : Mar 17, 2021, 8:25 PM IST

ಬೆಳಗಾವಿ : ಕೋವಿಡ್ ಹಿನ್ನೆಲೆ ಲೋಕಸಭಾ ಉಪಚುನಾವಣೆ ಸಂದರ್ಭದಲ್ಲಿ ಪ್ರಚಾರ, ನಾಮಪತ್ರ ಸಲ್ಲಿಕೆಗೆ ಅನುಮತಿ ನೀಡಿಕೆಗೆ ಸಂಬಂಧ ಬಹಳಷ್ಟು ಮಾರ್ಗಸೂಚಿಗಳು ಪರಿಷ್ಕರಣೆಗೊಂಡಿವೆ. ಹೊಸ ಮಾರ್ಗಸೂಚಿ ಅನ್ವಯವೇ ಅನುಮತಿ ನೀಡಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ತಿಳಿಸಿದರು.

ನಗರದ ಡಿಸಿ ಕಚೇರಿಯ ಸಭಾಂಗಣದಲ್ಲಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಮಾದರಿ ನೀತಿ ಸಂಹಿತೆ ಪಾಲನೆಗೆ ಕ್ರಮಕೈಗೊಳ್ಳಬೇಕು.

ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಸಾರ್ವನಿಕರಿಂದ ದೂರು ಸ್ವೀಕರಿಸಲು ಅನುಕೂಲವಾಗುವಂತೆ ನಿಯಂತ್ರಣ ಕೊಠಡಿ ಆರಂಭಿಸಬೇಕು. ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳು ಆಯಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದ ಕೆಲಸಗಳನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು ಎಂದರು.

ಓದಿ : ಬೆಳಗಾವಿ ಲೋಕಸಭೆ ಉಪ ಕದನ: ಕೈ-ಕಮಲದ ಅಭ್ಯರ್ಥಿಗಳಾರು?

ಕೋವಿಡ್ ಹಿನ್ನೆಲೆ 80 ವರ್ಷ ಮೇಲ್ಪಟ್ಟವರು, ಕೋವಿಡ್ ಸೋಂಕಿತರು ಹಾಗೂ ವಿಕಲಚೇತನರಿಗೆ ಪೋಸ್ಟಲ್ ಬ್ಯಾಲೆಟ್ ಒದಗಿಸಲು ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಕ್ರಮಕೈಗೊಂಡು ಮತದಾರರ ಪಟ್ಟಿಯಲ್ಲಿ ಗುರುತು ಮಾಡಬೇಕು. ಅಕ್ರಮ ಮದ್ಯ ಮಾರಾಟ ಹಾಗೂ ಸಾಗಾಣಿಕೆ ಮೇಲೆ ಹೆಚ್ಚಿನ ನಿಗಾವಹಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಚುನಾವಣಾ ಅಕ್ರಮಗಳು ಕಂಡುಬಂದರೆ ಸಂಬಂಧಿಸಿದ ಎಫ್.ಎಸ್.ಟಿ.ಮತ್ತಿತರ ತಂಡಗಳು ತಕ್ಷಣವೇ ದೂರು ದಾಖಲಿಸಬೇಕು ಎಂದರು.

ಅಬಕಾರಿ ಇಲಾಖೆಯ ಉಪ ಆಯುಕ್ತ ಅರುಣಕುಮಾರ್ ಮಾತನಾಡಿ, ಕೂಗನೊಳ್ಳಿ ಹಾಗೂ ಕಣಕುಂಬಿ ಎರಡೂ‌ ಕಡೆ ಅಬಕಾರಿ ಇಲಾಖೆಯ ವತಿಯಿಂದ ಶಾಶ್ವತ ಚೆಕ್ ಪೋಸ್ಟ್ ಕಾರ್ಯನಿರ್ವಹಿಸುತ್ತಿದ್ದು, ಉಳಿದಂತೆ ಅಕ್ರಮ ಮದ್ಯ ಮಾರಾಟ ಅಥವಾ ಸಾಗಾಣಿಕೆ ಮೇಲೂ ನಿಗಾವಹಿಸಲಾಗಿದೆ ಎಂದರು.

ನಗರ ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್, ಬೆಳಗಾವಿ ನಗರ ಪೊಲೀಸ್ ಉಪ ಆಯುಕ್ತ ಡಾ.ವಿಕ್ರಮ್ ಆಮಟೆ, ಮಹಾನಗರ ಪಾಲಿಕೆಯ ಆಯುಕ್ತ ಕೆ ಹೆಚ್ ಜಗದೀಶ್ ಇದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.