ETV Bharat / state

ಗಡಿಯಲ್ಲಿ ಪ್ರವಾಹದ ಭೀತಿ : ನದಿ ತೀರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ - ಚಿಕ್ಕೋಡಿಯಲ್ಲಿ ಪ್ರವಾಹದ ಭೀತಿ

ಪ್ರವಾಹ ಭೀತಿ ಎದುರಿಸುತ್ತಿರುವ ಜಿಲ್ಲೆಯ 377 ಗ್ರಾಮಗಳ ಜನರನ್ನು ತುರ್ತು ಸಂದರ್ಭದಲ್ಲಿ ಸ್ಥಳಾಂತರಿಸಲು ಅಗತ್ಯವಿರುವ ಕಾಳಜಿ(ಪರಿಹಾರ) ಕೇಂದ್ರಗಳನ್ನು ಈಗಾಗಲೇ ಗುರುತಿಸಲಾಗಿದೆ. ಸಮೀಪದಲ್ಲಿರುವ ನಿಗದಿತ ಕಾಳಜಿ ಕೇಂದ್ರಗಳಿಗೆ ಜನರನ್ನು ಸ್ಥಳಾಂತರಿಸಬೇಕು ಎಂದು ತಹಶೀಲ್ದಾರ್​​ ಹಾಗೂ ಇತರ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು..

chikkodi
chikkodi
author img

By

Published : Jun 18, 2021, 9:25 PM IST

ಚಿಕ್ಕೋಡಿ : ಚಿಕ್ಕೋಡಿ ಉಪವಿಭಾಗದಲ್ಲಿ ಎರಡ್ಮೂರು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಮ್ಮ ಪಾತ್ರವನ್ನೂ ಬಿಟ್ಟು ನದಿಗಳು ಉಕ್ಕಿ ಹರಿಯುತ್ತಿರುವ ಹಿನ್ನೆಲೆ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ವೇದಗಂಗಾ ನದಿ ಪಾತ್ರದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಸಮೀಪದ ಜತ್ರಾಟ ಹಾಗೂ ಅಕ್ಕೋಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವೇದಗಂಗಾ ನದಿ ಹರಿವು ಪ್ರಮಾಣವನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಅಧಿಕಾರಿಗಳ ಜತೆ‌ ಚರ್ಚೆ ನಡೆಸಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ನದಿ ನೀರಿನ‌ ಪ್ರಮಾಣ ಹೆಚ್ಚಾದರೆ ಮುಂಜಾಗ್ರತಾ ಕ್ರಮವಾಗಿ ನದಿತೀರದ ಗ್ರಾಮಗಳ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂದು ಸೂಚನೆ ನೀಡಿದರು. ಸಂಭವನೀಯ ಪ್ರವಾಹ ‌ಹಾಗೂ ಅತಿವೃಷ್ಟಿಯಂತಹ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಜಿಲ್ಲಾಡಳಿತ ಎಲ್ಲ ಸಿದ್ಧತೆಗಳನ್ನು ಮಾಡಿದೆ.

ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿದೆ. ಸದ್ಯಕ್ಕೆ ಪ್ರವಾಹ ಭೀತಿ ಇಲ್ಲ. ಆದಾಗ್ಯೂ, ನದಿಗಳ ನೀರಿನ ಮಟ್ಟ ಹಾಗೂ ಮಳೆಯ ಪ್ರಮಾಣದ ಮೇಲೆ‌ ಸಂಬಂಧಿಸಿದ ಅಧಿಕಾರಿಗಳು ನಿರಂತರ ನಿಗಾವಹಿಸಬೇಕು ಎಂದರು. ನದಿತೀರದ ಗ್ರಾಮಗಳ‌ ಜನರಿಗೆ ಆಗಾಗ ಸೂಕ್ತ ಮುನ್ನೆಚ್ಚರಿಕೆ ನೀಡಬೇಕು. ಒಂದು ವೇಳೆ ಪ್ರವಾಹ ಸ್ಥಿತಿ ಉದ್ಭವಿಸಿದರೆ ತಡಮಾಡದೇ ಜನರು ಹಾಗೂ ಜಾನುವಾರುಗಳ ಸ್ಥಳಾಂತರಕ್ಕೆ ಕ್ರಮಕೈಗೊಳ್ಳಬೇಕು.

ಪ್ರವಾಹ ಭೀತಿ ಎದುರಿಸುತ್ತಿರುವ ಜಿಲ್ಲೆಯ 377 ಗ್ರಾಮಗಳ ಜನರನ್ನು ತುರ್ತು ಸಂದರ್ಭದಲ್ಲಿ ಸ್ಥಳಾಂತರಿಸಲು ಅಗತ್ಯವಿರುವ ಕಾಳಜಿ(ಪರಿಹಾರ) ಕೇಂದ್ರಗಳನ್ನು ಈಗಾಗಲೇ ಗುರುತಿಸಲಾಗಿದೆ. ಸಮೀಪದಲ್ಲಿರುವ ನಿಗದಿತ ಕಾಳಜಿ ಕೇಂದ್ರಗಳಿಗೆ ಜನರನ್ನು ಸ್ಥಳಾಂತರಿಸಬೇಕು ಎಂದು ತಹಶೀಲ್ದಾರ್​​ ಹಾಗೂ ಇತರ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹಿರೇಮಠ ನಿರ್ದೇಶನ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.