ETV Bharat / state

ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆ: ಅವಿರೋಧ ಆಯ್ಕೆಗೆ ಬಿಜೆಪಿ ಚಿಂತನೆ - ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರ ಅವಿರೋಧ ಆಯ್ಕೆ

ಬೆಳಗಾವಿಯ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಯಲ್ಲಿ ಅವಿರೋಧ ಆಯ್ಕೆ ಪ್ರಕ್ರಿಯೆ ನಡೆಸಲು ಬಿಜೆಪಿ ಮುಖಂಡರು ನಿರ್ಧರಿಸಿದ್ದಾರೆ.

Belgavi DCC Bank Election update
ಡಿಸಿಎಂ ಲಕ್ಷ್ಮಣ ಸವದಿ
author img

By

Published : Oct 29, 2020, 4:04 PM IST

ಬೆಳಗಾವಿ : ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದ್ದು, ಅವಿರೋಧ ಆಯ್ಕೆಗೆ ನಮ್ಮ ವರಿಷ್ಠರು ಸೂಚಿಸಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದರು.

ಡಿಸಿಎಂ ಲಕ್ಷ್ಮಣ ಸವದಿ

ಜಿಲ್ಲಾ ಮುಖಂಡರ ಜೊತೆಗೆ ನಡೆದ ಗೌಪ್ಯ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ವರಿಷ್ಠರ ಸೂಚನೆ ಹಿನ್ನೆಲೆ ಅವಿರೋಧ ಆಯ್ಕೆಗೆ ಪ್ರಯತ್ನ ನಡೆದಿವೆ. ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ನಾಳೆ ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಡಿದ್ದು ಕೆಲವರು ನಾಮಪತ್ರ ಹಿಂಪಡೆಯುತ್ತಾರೆ. ಬ್ಯಾಂಕ್ ಅಭಿವೃದ್ಧಿ ಹಾಗೂ ರೈತರ ಹಿತದೃಷ್ಟಿಯಿಂದ ಅವಿರೋಧ ಆಯ್ಕೆ ಮೂಲಕ ರಾಜ್ಯಕ್ಕೆ ಹೊಸ ಸಂದೇಶ ರವಾನೆಯಾಗಲಿದೆ. ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಕೂಡ ಇದೇ ಮಾದರಿಯಲ್ಲಿ ಪ್ರಕ್ರಿಯೆ ಇರುತ್ತದೆ ಎಂದರು.

ಈಗಾಗಲೇ ಎಲ್ಲಾ ಮುಖಂಡರ ಜೊತೆಗೆ ಸಭೆ‌ ನಡೆಸಲಾಗಿದೆ. ಒಮ್ಮತದಿಂದ ನಿರ್ದೇಶಕರ ಆಯ್ಕೆ ನಡೆಯಲಿದೆ ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.