ಬೆಳಗಾವಿ : ಜಿಲ್ಲೆಯಲ್ಲಿ ಕೊರೊನಾಗೆ ಮತ್ತೋರ್ವ ವೃದ್ಧ ಬಲಿಯಾಗಿದ್ದಾನೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ತೀವ್ರ ಉಸಿರಾಟ ಸಮಸ್ಯೆ ಹಾಗೂ ಜ್ವರದಿಂದ ಬಳಲುತ್ತಿದ್ದ ಅಥಣಿ ಪಟ್ಟಣದ 60 ವರ್ಷದ ವೃದ್ಧ ನಿನ್ನೆ ಬೆಳಗ್ಗೆ ಬೆಳಗಾವಿಯ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ. ತಕ್ಷಣವೇ ಇವರನ್ನು ಕೋವಿಡ್ ವಾರ್ಡ್‌ಗೆ ಶಿಫ್ಟ್ ಮಾಡಿ ಚಿಕಿತ್ಸೆ ಆರಂಭಿಸಲಾಗಿತ್ತು. ಇಂದು ಬೆಳಗ್ಗೆ ವೃದ್ಧ ಚಿಕಿತ್ಸೆ ಫಲಿಸದೇ ಮೃತನಾಗಿದ್ದಾನೆ. ಮೃತ ವೃದ್ಧನಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ಖಚಿತ ಪಡಿಸಿವೆ.
ಜಿಲ್ಲೆಯಲ್ಲಿ ಈವರೆಗೆ ಅಥಣಿ ತಾಲೂಕಿನ ಮೂವರು, ಬೆಳಗಾವಿಯ ಇಬ್ಬರು, ಹಿರೇಬಾಗೇವಾಡಿಯ ವೃದ್ಧೆ ಹಾಗೂ ಕುಡಚಿ ಪಟ್ಟಣದ ವೃದ್ಧ ಕೊರೊನಾಗೆ ಬಲಿಯಾಗಿದ್ದಾರೆ.