ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಒಂದೇ ದಿನ ದಾಖಲೆ ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾಗಿದ್ದಾರೆ.
ಜಿಲ್ಲೆಯಲ್ಲಿ ಮಂಗಳವಾರ ಒಂದೇ ದಿನ ಸುಮಾರು 575 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 6022ಕ್ಕೆ ಏರಿಕೆಯಾಗಿದೆ.
ಕೊರೊನಾ ಸೋಂಕಿಗ ನಾಲ್ವರು ಬಲಿಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 101 ಆಗಿದೆ.
ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 444 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 3324 ಆ್ಯಕ್ಟೀವ್ ಪ್ರಕರಣಗಳಿವೆ.