ಬೆಳಗಾವಿ: ಜಿಲ್ಲೆಯ 43 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಜಿಲ್ಲಾಡಳಿತ ಇನ್ನೂ 135 ಶಂಕಿತರ ವರದಿಯ ನಿರೀಕ್ಷೆಯಲ್ಲಿದೆ.
ಜಿಲ್ಲೆಯಲ್ಲಿ 39 ಕೊರೊನಾ ಪ್ರಕರಣಗಳು ದಾಖಲಾಗಿವೆ. ಇದಲ್ಲದೇ 2,224 ಜನರ ಮೇಲೆ ನಿಗಾ ಇಡಲಾಗಿದ್ದು, ಒಟ್ಟು 411 ಜನರನ್ನು 14 ದಿನಗಳ ಕಾಲ ಹೋಂ ಕ್ವಾರಂಟೈನಲ್ಲಿ ಇರಿಸಲಾಗಿದೆ. ಒಟ್ಟು 39 ಸೋಂಕಿತರಿಗೆ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ 708 ಜನರಿಗೆ 14 ದಿನಗಳ ಹೋಮ್ ಕ್ವಾರಂಟೈನ್ ಹಾಗೂ 1,066 ಜನರ 28 ದಿನಗಳ ಹೋಮ್ ಕ್ವಾರಂಟೈನ್ ಮುಗಿದಿದೆ.
ಜಿಲ್ಲೆಯಿಂದ 923 ಜನರ ಗಂಟಲು ದ್ರವವನ್ನು ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿತ್ತು. ಅದರಲ್ಲಿ 43 ಜನರಲ್ಲಿ ಕೊರೊನಾ ಪಾಸಿಟಿವ್ ಬಂದಿತ್ತು. ಇದರಲ್ಲಿ ಓರ್ವ ವೃದ್ಧೆ ಮೃತಪಟ್ಟಿದ್ದರೆ ಮೂವರು ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 731 ಜನರ ವರದಿ ಕೊರೊನಾ ನೆಗೆಟಿವ್ ಬಂದಿದ್ದು, ಜಿಲ್ಲಾಡಳಿತ 135 ಜನರ ವರದಿ ನಿರೀಕ್ಷೆಯಲ್ಲಿದೆ.