ETV Bharat / state

ಬೆಳಗಾವಿಯಲ್ಲಿ ಶನಿವಾರ ಭಗವದ್ಗೀತೆ ಮಹಾಸಮರ್ಪಣೆ: ಶ್ರೀಮದ್ ಗಂಗಾಧರೇಂದ್ರ ಸ್ವಾಮೀಜಿ ಮಾಹಿತಿ - ಶ್ರೀಮದ್ ಗಂಗಾಧರೇಂದ್ರ ಸ್ವಾಮೀಜಿ

ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ ಶನಿವಾರ ಬೆಳಗಾವಿಯಲ್ಲಿ ನಡೆಯಲಿದೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ತಿಳಿಸಿದ್ದಾರೆ.

Shrimad Gangadharendra Swamiji
ಶ್ರೀಮದ್ ಗಂಗಾಧರೇಂದ್ರ ಸ್ವಾಮೀಜಿ
author img

By ETV Bharat Karnataka Team

Published : Dec 21, 2023, 7:45 AM IST

Updated : Dec 21, 2023, 12:13 PM IST

ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಅವರಿಂದ ಮಾಹಿತಿ

ಬೆಳಗಾವಿ: ಕಳೆದ ಒಂದು ತಿಂಗಳಿನಿಂದ ಬೆಳಗಾವಿ ಕೇಂದ್ರಿತವಾಗಿ ರಾಜ್ಯಾದ್ಯಂತ ನಡೆಯುತ್ತಿರುವ ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ ಶನಿವಾರ ಬೆಳಗಾವಿಯಲ್ಲಿ ನಡೆಯಲಿದೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಮಾಹಿತಿ ನೀಡಿದರು.

ಈ ಕುರಿತು ಬೆಳಗಾವಿಯಲ್ಲಿ ಶ್ರೀಗಳು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಬೆಳಗಾವಿಯ ಕಾಲೇಜು ರಸ್ತೆಯ ಲಿಂಗರಾಜ ಕಾಲೇಜು ಮೈದಾನದಲ್ಲಿ ಅಂದು ಸಂಜೆ 4 ಗಂಟೆಯಿಂದ ನಡೆಯಲಿರುವ ಕಾರ್ಯಕ್ರಮದಲ್ಲಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು ಸಾನ್ನಿಧ್ಯ ವಹಿಸುವರು. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು. ರಾಜ್ಯಸಭಾ ಸದಸ್ಯ ಸುಧಾಂಶು ತ್ರಿವೇದಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು, ಜನಪ್ರತಿನಿಧಿಗಳು, ಗಣ್ಯರು ಸಹ ಭಾಗವಹಿಸಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ 50 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದ್ದು, ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಲಿದೆ. ಹಾಗಾಗಿ ಸಾರ್ವಜನಿಕರು ತಪ್ಪದೇ ಭಾಗವಹಿಸಬೇಕು ಎಂದು ಸ್ವಾಮೀಜಿ ಕೋರಿದರು. ಇನ್ನು ಕಳೆದ ನವೆಂಬರ್ 21ರಂದು ಬೆಳಗಾವಿ ಕೇಂದ್ರಿತವಾಗಿ ರಾಜ್ಯಾದ್ಯಂತ ಭಗವದ್ಗೀತೆ ಅಭಿಯಾನ ಉದ್ಘಾಟನೆಯಾಗಿದ್ದು, ಅತ್ಯಂತ ಉತ್ತಮವಾಗಿ ನಡೆಯುತ್ತಿದೆ. ಬೆಳಗಾವಿ ಜಿಲ್ಲಾದ್ಯಂತ 159 ಶ್ಲೋಕ ಕೇಂದ್ರಗಳು ನಡೆಯುತ್ತಿದ್ದು, ನೂರಾರು ಶಾಲೆಗಳ 28 ಸಾವಿರಕ್ಕೂ ಹೆಚ್ಚು ಮಕ್ಕಳು ಭಗವದ್ಗೀತೆ ಕಲಿತಿದ್ದಾರೆ.

50ಕ್ಕೂ ಹೆಚ್ಚು ಉಪನ್ಯಾಸಗಳು, ಭಗವದ್ಗೀತೆ ಮತ್ತು ಕಾನೂನು, ಭಗವದ್ಗೀತೆ ಮತ್ತು ಮ್ಯಾನೇಜ್ಮೆಂಟ್ ಹಾಗೂ ಗೀತಾ ಸಮನ್ವಯ ಎನ್ನುವ 3 ಪ್ರಮುಖ ಕಾರ್ಯಕ್ರಮಗಳು ನಡೆದಿವೆ ಎಂದರು. ಮನುಷ್ಯನ ಇಂದಿನ ಜೀವನಕ್ಕೆ ಭಗವದ್ಗೀತೆ ಕೊಡುವ ಜೀವನ ಕ್ರಮದ ಅಗತ್ಯವಿದೆ. ಶಾಂತಿ ಕಾಣದೇ ಮನುಷ್ಯ ಚಡಪಡಿಸುತ್ತಿದ್ದಾನೆ. ವಿಜ್ಞಾನದಲ್ಲಿ ನಾವು ಪ್ರಗತಿ ಸಾಧಿಸುತ್ತಿದ್ದೇವೆ.

ಆದರೆ, ಮಾನಸಿಕ ಆರೋಗ್ಯದಲ್ಲಿ ನಾವು ಹಿಂದೆ ಹೋಗುತ್ತಿದ್ದೇವೆ. ವಿಶ್ವದ ಬೇರೆ ಬೇರೆ ದೇಶಗಳಲ್ಲಿ ಕೂಡ ಪರಿಸ್ಥಿತಿ ಗಂಭೀರವಾಗಿದೆ. ನಮ್ಮ ಸಂಸ್ಕೃತಿ ಪ್ರಭಾವದಿಂದಾಗಿ ಬೇರೆ ದೇಶಗಳಷ್ಟು ನಮ್ಮಲ್ಲಿ ಕೆಟ್ಟಿಲ್ಲ. ಸಣ್ಣ ವಯಸ್ಸಿನಲ್ಲೇ ಹೃದಯಾಘಾತ ಪ್ರಮಾಣ ಕೂಡ ಹೆಚ್ಚಾಗುತ್ತಿದೆ. ವೈಜ್ಞಾನಿಕವಾಗಿ ಮುಂದೆ ಹೋದಷ್ಟೇ ಮಾನಸಿಕವಾಗಿ ಹಿಂದೆ ಹೋಗುತ್ತಿದ್ದೇವೆ. ಇದಕ್ಕೆಲ್ಲ ಔಷಧ ಭಗವದ್ಗೀತೆಯಲ್ಲಿದೆ. ಹಾಗಾಗಿ ಭಗವದ್ಗೀತೆ ಅಭಿಯಾನದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಎಂದು ಸ್ವಾಮೀಜಿ ಕೇಳಿಕೊಂಡರು.

ಇದನ್ನೂ ಓದಿ: ಬೆಳಗಾವಿಯಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಸಿಎಂ ಘೋಷಣೆ: 'ಈಟಿವಿ ಭಾರತ' ವರದಿಗೆ ಉದ್ಯಮಿಗಳ ಅಭಿನಂದನೆ

Last Updated : Dec 21, 2023, 12:13 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.