ಚಿಕ್ಕೋಡಿ: ಬಹುಜನ ಕ್ರಾಂತಿ ಮೊರ್ಚಾ ಕರೆ ನೀಡಿದ್ದ ಭಾರತ್ ಬಂದ್ಗೆ ವಿವಿಧ ದಲಿತ ಸಂಘಟನೆಗಳು ಹಾಗೂ ಮುಸ್ಲಿಂ ಸಂಘಟನೆಗಳು ಚಿಕ್ಕೋಡಿಯಲ್ಲಿ ಯಾವುದೇ ರೀತಿಯ ಬೆಂಬಲ ಸೂಚಿಸಿಲ್ಲ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಅಂಗಡಿ ಮುಂಗಟ್ಟುಗಳು ಎಂದಿನಂತೆ ತೆರೆದಿದ್ದು, ವ್ಯಾಪಾರ ವಹಿವಾಟು ಮುಂದುವರೆದಿದೆ. ಕೆಎಸ್ಆರ್ಟಿಸಿ ಬಸ್ಗಳ ಸಂಚಾರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ವಿದ್ಯಾರ್ಥಿಗಳು ಎಂದಿನಂತೆ ಶಾಲಾ-ಕಾಲೇಜುಗಳಿಗೆ ತೆರಳಿದ್ದಾರೆ.