ಬೆಳಗಾವಿ: ಶಾಸಕ ಅಭಯ್ ಪಾಟೀಲ್ ಮಾಡಿರುವ ಭ್ರಷ್ಟಾಚಾರವನ್ನು ಬಿಜೆಪಿ ಸರ್ಕಾರ ರಕ್ಷಣೆ ಮಾಡುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಭಾಸ್ಕರ್ ರಾವ್ ಆರೋಪ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಅವರು, ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಮೇಲೆ ಆಸ್ತಿ ದುಪ್ಪಟ್ಟು ಪ್ರಕರಣ ಹಿನ್ನೆಲೆಯಲ್ಲಿ 2012ರಲ್ಲಿ ಬೆಳಗಾವಿ ಮೂಲದ ಸಾಮಾಜಿಕ ಕಾರ್ಯಕರ್ತ ಸುಜೀತ್ ಮುಳಗುಂದ ದೂರು ಸಲ್ಲಿಸಿದ್ದರು. ಜನಪ್ರತಿನಿಧಿಗಳ ಮೇಲೆ ಬಂದಿರುವ ದೂರಿನ ಮೇಲೆ ಸಭಾಪತಿಗಳಿಗೆ ಶಾಸಕರ ಮೇಲೆ ಬಂದಿರುವ ಆರೋಪಕ್ಕೆ ದೂರು ಸಲ್ಲಿಸಲಾಗಿತ್ತು. ಸದ್ಯ ಬೆಳಗಾವಿ ದಕ್ಷಿಣ ಶಾಸಕರ ಮೇಲೆ ದೂರನ್ನು ಸಭಾಪತಿಗಳು ತಿರಸ್ಕಾರ ಮಾಡಿದ್ದಾರೆ.
ಒಬ್ಬ ಭ್ರಷ್ಟ, ದುರಹಂಕಾರಿ ಶಾಸಕನ ಮೇಲೆ ಕಾನೂನಾತ್ಮಕ ಯಾವುದೇ ಕ್ರಮ ಆಗಬಾರದೆಂದು ಬೆಂಗಳೂರಿನಲ್ಲಿ ತೀರ್ಮಾನ ಮಾಡುತ್ತಿದ್ದಾರೆ. ಇದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶೋಭೆ ತರುವ ವಿಚಾರವಲ್ಲ. ಯಾರು ತಪ್ಪು ಮಾಡಿದ್ದಾರೋ ಅವರ ಮೇಲೆ ತುರ್ತಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮೊದಲೇ 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಬೋರ್ಡ್ ಹಾಕುತ್ತಿದ್ದಾರೆ. ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಹಲವಾರು ಭ್ರಷ್ಟಾಚಾರದ ಆರೋಪಗಳು ಕೇಳಿ ಬರುತ್ತಿವೆ. ಸರ್ಕಾರ ಸೂಕ್ತ ರೀತಿ ಕ್ರಮ ಕೈಗೊಳ್ಳಬೇಕು. ಭ್ರಷ್ಟರನ್ನು ಬಿಟ್ಟು ಕೇಂದ್ರ ಸರ್ಕಾರ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಮೇಲೆ ಐಟಿ, ಇಡಿ ದಾಳಿ ನಡೆಸುತ್ತಿದೆ ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಭಾಸ್ಕರ್ ರಾವ್ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಬೆಂಗಳೂರು: ಪೃಥ್ವಿ ರೆಡ್ಡಿ, ಭಾಸ್ಕರ್ ರಾವ್ ನೇತೃತ್ವದಲ್ಲಿ ಎಎಪಿಯಿಂದ ಪ್ರವಾಹ ಪ್ರದೇಶಗಳ ಪರಿಶೀಲನೆ....