ಚಿಕ್ಕೋಡಿ : ರಸ್ತೆ ಬದಿಗೆ ನಿಂತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ತಾಲೂಕಿನ ಯಡೂರ ಗ್ರಾಮದಲ್ಲಿ ನಡೆದಿದೆ.
ಬಸವರಾಜ ಉಮರಾಣಿ (55) ಮೃತಪಟ್ಟ ವ್ಯಕ್ತಿ. ವೇಗವಾಗಿ ಬಂದ ಬೈಕ್ ಸವಾರ ರಸ್ತೆ ಬದಿಯಲ್ಲಿ ನಿಂತಿದ್ದ ಬಸವರಾಜಗೆ ಡಿಕ್ಕಿ ಹೊಡೆದು ಹೋಗಿದ್ದಾನೆ. ತಲೆಗೆ ಗಂಭೀರವಾಗಿ ಪೆಟ್ಟುಬಿದ್ದು ತೀವ್ರ ರಕ್ತಸಾವ್ರವಾಗಿದೆ. ತಕ್ಷಣವೇ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ಕುರಿತು ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.