ಬೆಳಗಾವಿ: ಖಾಸಗಿ ಶಾಲಾ ಬಸ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ.
ರಾಜನಂದಿನಿ (5) ಮೃತ ಬಾಲಕಿ ಎಂದು ತಿಳಿದು ಬಂದಿದೆ. ರಾಜನಂದಿನಿ ತನ್ನ ತಾಯಿ ಹಾಗೂ ಸಹೋದರ ಮಾವನೊಂದಿಗೆ ಬೈಕ್ನಲ್ಲಿ ಹೋಗುತ್ತಿದ್ದಾಗ ತಿರುವಿನಲ್ಲಿ ಬಸ್ ವೇಗವಾಗಿ ಬಂದ ಪರಿಣಾಮ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬಾಲಕಿಯ ತಾಯಿ ಹಾಗೂ ಮಾವನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತಕ್ಕೆ ಒಳಗಾದ ಬಸ್ ಚಿಕ್ಕೋಡಿ ಪಟ್ಟಣದ ಸೇಂಟ್ ಫ್ರಾನ್ಸಿಸ್ ಶಾಲೆಗೆ ಸೇರಿದ್ದು, ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.