ಚಿಕ್ಕೋಡಿ(ಬೆಳಗಾವಿ): ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಬ್ಬ ಬೈಕ್ ಸವಾರ ಸಾವನ್ನಪ್ಪಿದ್ದು, ಇನ್ನೊಬ್ಬನಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ನಾಗರಮುನ್ನೊಳ್ಳಿ ಗ್ರಾಮದ ಪುಡಲಿಂಕ ಬಂಬಲವಾಡಿ (25) ಅಪಘಾತದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನೊಬ್ಬ ಬೈಕ್ ಸವಾರನೂ ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಕುರಿತು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.