ಚಿಕ್ಕೋಡಿ : ಅತಿಯಾದ ವೇಗದಿಂದ ಹೋಗುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಅಪಘಾತವಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4 ರ ಚಿಕ್ಕಾಲಗುಡ್ಡ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ. ಮೃತ ವ್ಯಕ್ತಿ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ನಿವಾಸಿ ಮಾರುತಿ ಶಾಮರಾವ್ ಪಾತ್ರೋಟ (35) ಎಂದು ಗುರುತಿಸಲಾಗಿದೆ.
ಕೆಲಸಕ್ಕೆ ಹೋಗಿ ಮನೆಗೆ ವಾಪಸ್ ಅಗುವಾಗ ಈ ದುರಂತ ನಡೆದಿದೆ. ಘಟನೆ ಸಂಬಂಧ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.