ETV Bharat / state

ಪಾಸಿಟಿವ್ ಬಂದ ಮೆಡಿಕಲ್ ವಿದ್ಯಾರ್ಥಿಗಳನ್ನು ವಸತಿ ನಿಲಯದಿಂದ ಹೊರಹಾಕಿದ ಬೀಮ್ಸ್: ಆರೋಪ - ಬೀಮ್ಸ್ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಗಳು

ಬೀಮ್ಸ್ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಗಳು, ಬೀಮ್ಸ್ ವಸತಿ ನಿಲಯದಲ್ಲಿ ವಾಸವಿದ್ದು, ಇದೀಗ ಸೋಂಕು ತಗುಲಿದೆ ಎಂಬ ಕಾರಣಕ್ಕೆ ಅವರನ್ನು ಮನೆಗೆ ಕಳುಹಿಸಿರುವುದು ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ.

Bims expelled medical students
ಬಿಮ್ಸ್
author img

By

Published : Apr 21, 2021, 10:13 PM IST

ಬೆಳಗಾವಿ: ನಗರದ ಬೀಮ್ಸ್ ಕಾಲೇಜು ಆಡಳಿತ ಮಂಡಳಿಯು ಮಹಾ ಎಡವಟ್ಟೊಂದನ್ನು ಮಾಡಿದ್ದು, ಕೊರೊನಾ ಪಾಸಿಟಿವ್ ಬಂದಿರುವ 14 ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದ ಆರೋಪ ಕೇಳಿ ಬಂದಿದೆ.

ವಿದ್ಯಾರ್ಥಿಗಳನ್ನು ವಸತಿ ನಿಲಯದಿಂದ ಹೊರಹಾಕಿದ ಬೀಮ್ಸ್

ನಗರದ ಬೀಮ್ಸ್ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಗಳು, ಬೀಮ್ಸ್ ವಸತಿ ನಿಲಯದಲ್ಲಿ ವಾಸವಿದ್ದು, ಆ ಪೈಕಿ 14 ವಿದ್ಯಾರ್ಥಿಗಳಿಗೆ ಸೋಂಕು‌ ದೃಢಪಟ್ಟಿದೆ. ಆದ್ರೆ, ಸೋಂಕಿತ ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕಾಗಿದ್ದ ಬೀಮ್ಸ್ ಕಾಲೇಜು ಆಡಳಿತ ಮಂಡಳಿ ಸೋಂಕು ತಗುಲಿದೆ ಎಂಬ ಕಾರಣಕ್ಕೆ ಅವರನ್ನು ಮನೆಗೆ ಕಳುಹಿಸಿರುವುದು ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ.

ಸಾರ್ವಜನಿಕರ ಆಕ್ರೋಶ:

ಸೋಂಕು ತಗುಲಿದ ವಿದ್ಯಾರ್ಥಿಗಳಿಗೆ ಕೋವಿಡ್ ಗುಣಲಕ್ಷಣಗಳು ಬಂದಿರುವ ಹಿನ್ನೆಲೆ ಇದೇ ಏಪ್ರಿಲ್ 19ರಂದು 50 ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. 50 ವಿದ್ಯಾರ್ಥಿಗಳ ಪೈಕಿ ಏಪ್ರಿಲ್ 20ರಂದು 14 ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ. ಆದ್ರೆ, ಕೊರೊನಾ ಪಾಸಿಟಿವ್ ಇದ್ರೂ ಬಿಮ್ಸ್ ಕಾಲೇಜು ಆಡಳಿತ ಮಂಡಳಿ‌ ಮನೆಗೆ ಕಳುಹಿಸಿ, ಮನೆಯಲ್ಲೇ ಹೋಮ್ ಕ್ವಾರೆಂಟೈನ್ ಆಗುವಂತೆ ಹೇಳಿ ವಸತಿ ನಿಲಯದಿಂದ ಹೊರ ದಬ್ಬಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಇದಲ್ಲದೇ ವಸತಿ ನಿಲಯದಲ್ಲಿದ್ದ 200ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದ್ದಾರೆ. ಇತ್ತ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದ್ದರಿಂದ ಜನರಲ್ಲಿ ಮತ್ತು ವಿದ್ಯಾರ್ಥಿಗಳ ಕುಟುಂಬಗಳಲ್ಲಿ ಮತ್ತಷ್ಟು ಆತಂಕ ಮನೆ ಮಾಡಿದೆ.

ಒಟ್ಟಾರೆ, ವೈದ್ಯಕೀಯ ಸಂಸ್ಥೆ ಇದ್ದುಕೊಂಡು ಕೊರೊನಾ ನಿಯಮ ಪಾಲನೆ ಮಾಡಿ ಇತರರಿಗೆ ಮಾದರಿ ಆಗಬೇಕಿದ್ದ ಬೀಮ್ಸ್ ‌ನಡುವಳಿಕೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಬೀಮ್ಸ್ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮಕೈಗೊಳ್ಳಬೇಕು ಎಂಬುವುದು ಸಾರ್ವಜನಿಕರು ಒತ್ತಾಯವಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.