ಬೆಳಗಾವಿ: ಜಿಲ್ಲೆಯ ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಪಾಶ್ಚಾಪುರ ಪಂಚಾಯಿತಿಯಿಂದ ನಿನ್ನೆಯಷ್ಟೇ ಆಯ್ಕೆಯಾಗಿದ್ದ ಬಿಜೆಪಿ ಬೆಂಬಲಿತ ಸದಸ್ಯೆ ಇಂದು ಪಕ್ಷ ತೊರೆದು ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ.
ಗ್ರಾಮ ಪಂಚಾಯಿತಿ ಚುನಾವಣೆಗೂ ಮುನ್ನ ಬಿಜೆಪಿ ಪಕ್ದಲ್ಲಿದ್ದ ಹಾಗೂ ಪಾಶ್ಚಾಪೂರ ಪಂಚಾಯಿತಿ 5 ನೇ ವಾರ್ಡ್ ನಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿದ್ದ ಮನಿಷಾ ಶಿಂಧೆ, ತಮ್ಮ ವಾರ್ಡ್ನಲ್ಲಿ ಜಯಗಳಿಸಿದ್ದಾರೆ. ನಿನ್ನೆಯಷ್ಟೇ ಚುನಾವಣೆಯ ಫಲಿತಾಂಶ ಹೊರಬಂದಿದ್ದು, ಇಂದು ಶಾಸಕ ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್, ಪ್ರಿಯಾಂಕಾ ಜಾರಕಿಹೊಳಿ ಅವರ ಸಮ್ಮುಖದಲ್ಲಿ ತಮ್ಮ ಕಾರ್ಯಕರ್ತರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಇನ್ನು ಪಕ್ಷ ಬದಲಾವಣೆಗೆ ಮನಿಷಾ ಕಾರಣ ತಿಳಿಸಿದ್ದು, ಶಾಸಕ ಸತೀಶ ಜಾರಕಿಹೊಳಿ ಅವರ ಅಭಿವೃದ್ದಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಎಂದರು.