ETV Bharat / state

ಮಾರ್ಚ್‌ 30ಕ್ಕೆ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ನಾಮಪತ್ರ : ಬಿಎಸ್‌ವೈ,ಕಟೀಲ್ ಸೇರಿ ಗಣ್ಯರು ಭಾಗಿ - Mahesh Tenginkai, the BJP state general secretary

ಸಭೆಯ ನಿರ್ಧಾರದಂತೆ ಮಾರ್ಚ್​ 30ರಂದು ಬೆಳಗ್ಗೆ 11ಕ್ಕೆ ನಾಮಪತ್ರ ಸಲ್ಲಿಸಲಾಗುತ್ತದೆ. ಮಾರ್ಚ್ 31ರಂದು ಬೆಳಗಾವಿ ಉತ್ತರ, ಬೆಳಗಾವಿ ದಕ್ಷಿಣ, ಬೆಳಗಾವಿ ಗ್ರಾಮೀಣದಲ್ಲಿ ಬೃಹತ್ ಸಮಾವೇಶ ಮಾಡಲಾಗುವುದು..

BJP Candidate Mangala angadi nomintion
ಮಾ.30ಕ್ಕೆ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ನಾಮಪತ್ರ
author img

By

Published : Mar 27, 2021, 8:48 PM IST

ಬೆಳಗಾವಿ : ಮಾ.30ರಂದು ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ನಾಮಪತ್ರ ಸಲ್ಲಿಸುತ್ತಿದ್ದಾರೆ. ಈ ವೇಳೆ ಸಿಎಂ ಬಿಎಸ್‌ವೈ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್​ ಕಟೀಲ್ ಸೇರಿ ಗಣ್ಯರು ಭಾಗಿಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ.

ಮಾ.30ಕ್ಕೆ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ನಾಮಪತ್ರ

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದ ಅವರು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಚಿವ ಜಗದೀಶ್ ಶೆಟ್ಟರ್, ಉಮೇಶ ಕತ್ತಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಪಕ್ಷದ ಗೆಲುವಿಗೆ ಬೇಕಾದ ಅಗತ್ಯ ರೂಪರೇಷೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ.

ಸಭೆಯ ನಿರ್ಧಾರದಂತೆ ಮಾರ್ಚ್​ 30ರಂದು ಬೆಳಗ್ಗೆ 11ಕ್ಕೆ ನಾಮಪತ್ರ ಸಲ್ಲಿಸಲಾಗುತ್ತದೆ. ಮಾರ್ಚ್ 31ರಂದು ಬೆಳಗಾವಿ ಉತ್ತರ, ಬೆಳಗಾವಿ ದಕ್ಷಿಣ, ಬೆಳಗಾವಿ ಗ್ರಾಮೀಣದಲ್ಲಿ ಬೃಹತ್ ಸಮಾವೇಶ ಮಾಡಲಾಗುವುದು.

ಏಪ್ರಿಲ್ 2ರಂದು ಬೈಲಹೊಂಗಲ, ಸವದತ್ತಿ, ರಾಮದುರ್ಗ ಹಾಗೂ ಕೊನೆಯ ಎರಡು ದಿನ ಗೋಕಾಕ್, ಅರಭಾವಿಯಲ್ಲಿ ಬಿಜೆಪಿ ಸಮಾವೇಶ ನಡೆಸಲಾಗುವುದು. ಈ ಎಲ್ಲ ಸಮಾವೇಶದಲ್ಲಿ ರಾಜ್ಯಮಟ್ಟದ ನಾಯಕರ ಪ್ರವಾಸದ ಮೂಲಕ ಮೊದಲ ಹಂತದ ಚುನಾವಣಾ ಪ್ರಚಾರ ಮಾಡಲಾಗುತ್ತದೆ ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.