ಬೆಳಗಾವಿ: ರಾಜ್ಯದಲ್ಲಿ ನಡೆದ ಆರ್.ಆರ್ ನಗರ ಹಾಗೂ ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುವುದು ನಿಶ್ಚಿತ ಎಂದು ಕರ್ನಾಟಕ ರಾಜ್ಯದ ದೆಹಲಿಯ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ ಹೇಳಿದ್ದಾರೆ.
ಶಿರಾ ಮತ್ತು ಆರ್.ಆರ್ ನಗರದ ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಗೆಲವು ಸಾಧಿಸಲಿದೆ. ಶಿರಾದಲ್ಲಿ ಹೇಳಿಕೊಳ್ಳುವಂತ ಅಭಿವೃದ್ಧಿಯಾಗಿಲ್ಲ. ಬಿದರಿನಕೆರೆಯ ಊರಿನಲ್ಲಿ ಸುಸಜ್ಜಿತವಾದ ಮೂಲ ಸೌಕರ್ಯ ಇಲ್ಲ. ಯುವಕರು ಸಾಕಷ್ಟು ಬುದ್ಧಿವಂತರಾಗಿದ್ದಾರೆ. ಜಾಗೃತರಾಗಿ ಸಮಾಜಸೇವೆ ಮಾಡದಿದ್ದರೆ ತಕ್ಕ ಪಾಠ ಕಲಿಸುತ್ತಾರೆ ಎಂದರು.
ಕಳೆದ 70 ವರ್ಷದಿಂದ ಆಡಳಿತ ಮಾಡಿದ ಕಾಂಗ್ರೆಸ್ ಹಾಗೂ ಮಧ್ಯದಲ್ಲಿ ಜೆಡಿಎಸ್ ಆಡಳಿತ ನಡೆಸಿದ್ರೂ ಅಭಿವೃದ್ಧಿಯಾಗಿಲ್ಲ. ಸಮಾಜ ಸೇವೆ ಮಾಡುವ ಪಕ್ಷಕ್ಕೆ ಬೆಂಬಲಿಸಲಿದ್ದಾರೆ. ಅದೇ ರೀತಿ ರಾಜರಾಜೇಶ್ವರಿ ನಗರದ ಉಪ ಚುನಾವಣೆಯಲ್ಲಿ ಮುನಿರತ್ನ ಅವರ ಗೆಲವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಳಗಾವಿ ಸ್ಮಾರ್ಟ್ ಸಿಟಿಯಲ್ಲಿ ಸಾಕಷ್ಟು ದೂರುಗಳು ಕೇಳಿ ಬರುತ್ತಿವೆ. ಜನರು ಜಾಗೃತರಾಗಬೇಕು. ತೆರಿಗೆ ಹಣದಲ್ಲಿ ಕಾಮಗಾರಿಗಳನ್ನು ಆರಂಭಿಸಲಾಗುತ್ತದೆ. ಇರದಲ್ಲಿ ಹಣ ದುರುಪಯೋಗವಾಗಲು ಬಿಡುವುದಿಲ್ಲ ಎಂದರು.