ETV Bharat / state

ಬಿಜೆಪಿಯವರು ನಿಮ್ಮ ಜೇಬಿಗೆ ಕತ್ತರಿ ಹಾಕಿದ್ರು, ನಾವು ನಿಮ್ಮ ಜೇಬಿಗೆ ಹಣ ನೀಡುತ್ತೇವೆ: ಸಿಎಂ ಸಿದ್ದರಾಮಯ್ಯ

author img

By

Published : Aug 11, 2023, 9:39 PM IST

ಕರ್ನಾಟಕ ರಾಜ್ಯದಲ್ಲಿ ಸವದಿ ದೊಡ್ಡ ನಾಯಕ. ಅವರು ಕಾಂಗ್ರೆಸ್​ ಪಕ್ಷಕ್ಕೆ ಬರುತ್ತಿದ್ದಂತೆ ನಮ್ಮ ಪಕ್ಷಕ್ಕೆ ಶಕ್ತಿ ಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಚಿಕ್ಕೋಡಿ: ಅಂದಿನ ಡಬಲ್ ಇಂಜಿನ ಸರ್ಕಾರ (ಬಿಜೆಪಿ) ನಿಮ್ಮ ಜೇಬಿಗೆ ಕತ್ತರಿ ಹಾಕಿ ಹಣ ಹೊಡೆದರು. ನಮ್ಮ ಸರ್ಕಾರ ನೀವು ಖರ್ಚು ಮಾಡಬೇಕೆಂದು ನಿಮಗೆ ತಿಂಗಳಿಗೆ ಎರಡು ಸಾವಿರ ರೂಪಾಯಿ ನೀಡುತ್ತಿದ್ದೇವೆ. ಇಂತಹ ಅವಕಾಶ ನಿಮಗೆ ಎಂದೂ ಬಾರದು. ನಮ್ಮದು ಜನಪರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಕಟನೂರ ಗ್ರಾಮದಲ್ಲಿಂದು ವಿವಿಧ ಕಾಮಗಾರಿಗಳು ಮತ್ತು ಪಶು ವೈದ್ಯಕೀಯ ಮಹಾವಿದ್ಯಾಲಯ ಉದ್ಘಾಟನೆ ನೆರವೇರಿಸಿ ಸಿಎಂ ಮಾತನಾಡಿದರು. ಅಥಣಿ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟನೆ ಮಾಡಲಾಗಿದೆ ಎಂದರು.

ಇದೇ ವೇಳೆ, ಲಕ್ಷ್ಮಣ್ ಸವದಿ ಈಗಷ್ಟೇ ಕಾಂಗ್ರೆಸ್ ಪಕ್ಷ ಸೇರಿದವರು. ಸವದಿ ಬಿಜೆಪಿ ಪಕ್ಷದಲ್ಲಿ ಇದ್ದಾಗಲೂ ನನ್ನ ಸ್ನೇಹಿತರು. ಅವರ ಶಕ್ತಿಯಿಂದಲೇ ಹಲವು ಕ್ಷೇತ್ರಗಳಲ್ಲಿ ಶಾಸಕರು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಪರವಾಗಿ ಹಾಗೂ ನನ್ನ ಪರವಾಗಿ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ. ಶಾಸಕರಾಗಿ, ಉಪಮುಖ್ಯಮಂತ್ರಿಯಾಗಿ, ಸಚಿವರಾಗಿ ಅಥಣಿ ಕ್ಷೇತ್ರದಲ್ಲಿ ಹಲವು ಕಾಮಗಾರಿಯನ್ನು ಸವದಿ ಮಾಡಿದ್ದಾರೆ. ಜನಪ್ರತಿನಿಧಿಗಳಾದವರು ಜನರ ಸೇವೆ ಮಾಡಬೇಕು. ಸವದಿ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿ ಮಾಡಿದ್ದಾರೆ. ಇಷ್ಟು ಕೆಲಸ ಮಾಡಿದರೂ ಸವದಿ ಇನ್ನೂ ನಮ್ಮ ಮುಂದೆ ಹಲವು ಬೇಡಿಕೆಯನ್ನು ಇಟ್ಟಿದ್ದಾರೆ. ಹಂತಹಂತವಾಗಿ ಅವರ ಬೇಡಿಕೆ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.

ನಮ್ಮದು ನುಡಿದಂತೆ ನಡೆದ ಸರ್ಕಾರ. ಹಿಂದೆ 165 ಭರವಸೆಯಲ್ಲಿ 158 ಭರವಸೆ ಈಡೇರಿಸಲಾಗಿದೆ. ಸದ್ಯ ಐದು ಗ್ಯಾರಂಟಿ ಯೋಜನೆ ಭರವಸೆ ನೀಡಲಾಗಿದೆ. ಇದರಲ್ಲಿ ಮೂರು ಗ್ಯಾರಂಟಿ ಯೋಜನೆ ಈಡೇರಿಸಲಾಗಿದೆ. ಅನ್ನಭಾಗ್ಯ, ಗೃಹ ಜ್ಯೋತಿ, ಶಕ್ತಿ ಯೋಜನೆ ನೀಡಲಾಗಿದೆ. ಗೃಹ ಲಕ್ಷ್ಮಿ ಯೋಜನೆ ಈ ತಿಂಗಳ ಕೊನೆಯಲ್ಲಿ ಈಡೇರಿಸಲಾಗುವುದು ಮತ್ತು ಇನ್ನುಳಿದ ಎರಡು ಯೋಜನೆ ರೂಪಿಸಲಾಗುವುದು ಎಂದು ಹೇಳಿದರು.

ಅಥಣಿಯಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ: ಇಂದು ರಾಜ್ಯದ ಆರನೆೇ ಪಶು ವೈದ್ಯಕೀಯ ಮಹಾವಿದ್ಯಾಲಯ ಉದ್ಘಾಟನೆಯನ್ನು ಸಿಎಂ ನೆರವೇರಿಸಿದರು. ಸರಿಸುಮಾರು ಮೂರು ಹಂತದಲ್ಲಿ 86 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಾಲೇಜು ಲೋಕಾರ್ಪಣೆಯಾಗಿದೆ.

ಇದಲ್ಲದೇ, ನಾಲ್ಕು ಕೋಟಿ ರೂಪಾಯಿ ವೆಚ್ಚದಲ್ಲಿ ಚಿಕ್ಕಟ್ಟಿ ಗ್ರಾಮದ ಸಮೀಪದಲ್ಲಿ ಆರ್.ಟಿ.ಓ ಕಚೇರಿ, ಕೋಕಟನೂರ ಗ್ರಾಮದಲ್ಲಿ 94 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಬಸ್​ ನಿಲ್ದಾಣ, 74 ಕೋಟಿ ವೆಚ್ಚದಲ್ಲಿ ಸತ್ತಿ ಮತ್ತು ಚಿಕ್ಕೋಡಿ ಬಹು ಕುಡಿಯುವ ನೀರು ಸರಬರಾಜು ಯೋಜನೆಗೆ ಶಂಕುಸ್ಥಾಪನೆ, 17 ಲಕ್ಷ ರೂಪಾಯಿ ಅಥಣಿ ಪಟ್ಟಣದಲ್ಲಿ ನಿರ್ಮಾಣವಾಗಿರುವ ಶ್ರೀ ಜಗಜ್ಯೋತಿ ಬಸವೇಶ್ವರ ಪ್ರತಿಮೆ ಅನಾವರಣ ಮಾಡಲಾಯಿತು.

22 ಕೋಟಿ ರೂಪಾಯಿ ವೆಚ್ಚದಲ್ಲಿ ಶ್ರೀ ಸಿದ್ದರಾಮೇಶ್ವರ ನೀರಾವರಿ ಯೋಜನೆ (ವಡ್ಡರ ಸಮಾಜ) ಉದ್ಘಾಟನೆ, ತೆಲಸಂಗ್ ಗ್ರಾಮದಲ್ಲಿ 1 ಕೋಟಿ 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಡಾ. ಬಿ ಆರ್ ಅಂಬೇಡ್ಕರ್ ವಸತಿ ನಿಲಯ, ಅಥಣಿ ಪಟ್ಟಣದಲ್ಲಿ ಒಂದು ಕೋಟಿ 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ವಾಲ್ಮೀಕಿ ಸಮುದಾಯ ಭವನದ ಉದ್ಘಾಟನೆಯನ್ನು ಸಿಎಂ ಸಿದ್ದರಾಮಯ್ಯ ನೆರವೇರಿಸಿದರು.

ಇದೇ ವೇಳೆ ಲಕ್ಷ್ಮಣ್ ಸವದಿ ಮಾತನಾಡಿ, ಅಥಣಿ ಭಾಗದಲ್ಲಿ 80 ಸಾವಿರ ಎಕರೆ ಪ್ರದೇಶ ಮಳೆಯಾಶ್ರಿತವಾಗಿದೆ. ಈ ಭಾಗದಲ್ಲಿ ನೀರಾವರಿ ಯೋಜನೆ ಇಲ್ಲದೇ ಇಲ್ಲಿನ ಜನರು ಮಹಾರಾಷ್ಟ್ರಕ್ಕೆ ಗುಳೆ ಹೋಗುತ್ತಿದ್ದಾರೆ. ಇದರಿಂದ ಈ ಭಾಗದಲ್ಲಿ ನೀರಾವರಿ ಯೋಜನೆ ರೂಪಿಸಿ ಎಂದು ಸಿಎಂ ಹಾಗೂ ಡಿಸಿಎಂಗೆ ಮನವಿ ಸಲ್ಲಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿ, ಇದು ನನ್ನ ಇಲಾಖೆಗೆ ಸಂಬಂಧಿಸಿದ ಉದ್ಘಾಟನೆಯಲ್ಲ. ಆದರೂ ನಾನು ಅಭಿಮಾನದಿಂದ ಇಲ್ಲಿ ಬಂದಿದ್ದೇನೆ. ಲಕ್ಷ್ಮಣ್ ಸವದಿಯವರನ್ನು ದೊಡ್ಡ ಮಟ್ಟದಲ್ಲಿ ಗೆಲ್ಲಿಸಿ ಬಿಜೆಪಿ ಪಕ್ಷಕ್ಕೆ ತಕ್ಕ ಉತ್ತರ ನೀಡಿದ್ದೀರಿ. ಲಕ್ಷ್ಮಣ್ ಸವದಿ ದೊಡ್ಡ ನಾಯಕ. ಒಳ್ಳೆಯ ಸಮಯದಲ್ಲಿ ಒಳ್ಳೆಯ ತೀರ್ಮಾನ ಮಾಡಿದ್ದಾರೆ' ಎಂದು ಹೊಗಳಿದರು.

ಇದನ್ನೂ ಓದಿ: ತನಿಖೆಯಲ್ಲಿ ತಪ್ಪು ಮಾಡಿಲ್ಲ ಅನ್ನೋದು ಸಾಬೀತಾದರೆ ಗುತ್ತಿಗೆದಾರರ ಬಿಲ್ ಕೊಡುತ್ತೇವೆ: ಸಿಎಂ‌ ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.