ETV Bharat / state

ಪ್ರತಿಪಕ್ಷಗಳ ಹಕ್ಕನ್ನು ಕಿತ್ತುಕೊಳ್ಳುವ ಹುನ್ನಾರ ಬಿಜೆಪಿ ಮಾಡುತ್ತಿದೆ.. ಮಾಜಿ ಸಚಿವೆ ಉಮಾಶ್ರೀ ಕಿಡಿ

ರಾಜ್ಯ ಬಿಜೆಪಿ ಇತರ ಪಕ್ಷಗಳನ್ನ ತನ್ನ ಹಿಡಿತದಲ್ಲಿಟ್ಟುಕೊಳ್ಳಲು ಪ್ರಯತ್ನಿಸುತ್ತಿದೆ‌. ಡಿ ಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಅನುಮತಿ ನೀಡದಿದ್ರೂ ಜನರ ಪರ ಕೆಲ‌ಸ ಮಾಡುತ್ತೇವೆ.

author img

By

Published : Jun 10, 2020, 9:24 PM IST

ಮಾಜಿ ಸಚಿವೆ ಉಮಾಶ್ರೀ
ಮಾಜಿ ಸಚಿವೆ ಉಮಾಶ್ರೀ

ಬೆಳಗಾವಿ : ರಾಜಕೀಯ ಷಡ್ಯಂತ್ರವನ್ನು ಮಾಡುತ್ತಿರುವ ಪಕ್ಷವನ್ನ ಹಿಮ್ಮೆಟ್ಟಿಸುವ ಪ್ರತಿಪಕ್ಷಗಳ ಹಕ್ಕನ್ನು ಕಿತ್ತುಕೊಳ್ಳುವ ಹುನ್ನಾರವನ್ನು ಆಡಳಿತ ಪಕ್ಷ ಮಾಡುತ್ತಿದೆ ಎಂದು ಹೇಳುವ ಮೂಲಕ ಮಾಜಿ ಸಚಿವೆ ಉಮಾಶ್ರೀ ಪರೋಕ್ಷವಾಗಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಮಾಜಿ ಸಚಿವೆ ಉಮಾಶ್ರೀ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ..

ಡಿಕೆಶಿ ಪದಗ್ರಹಣ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆಗೆ ಕುರಿತಂತೆ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾದ ನೆಪವಿಟ್ಟುಕೊಂಡು ಆತಡಳಿತ ಪಕ್ಷ ಮಾಡಬಾರದ್ದನೆಲ್ಲ ಮಾಡುತ್ತಿದೆ. ರಾಜ್ಯ ಬಿಜೆಪಿ ಇತರ ಪಕ್ಷಗಳನ್ನ ತನ್ನ ಹಿಡಿತದಲ್ಲಿಟ್ಟುಕೊಳ್ಳಲು ಪ್ರಯತ್ನಿಸುತ್ತಿದೆ‌. ಡಿ ಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಅನುಮತಿ ನೀಡದಿದ್ರೂ ಜನರ ಪರ ಕೆಲ‌ಸ ಮಾಡುತ್ತೇವೆ ಎಂದರು.

ರಾಜ್ಯ ಸರ್ಕಾರ ಪದಗ್ರಹಣ ಕಾರ್ಯಕ್ರಮಕ್ಕೆ ಯಾವಾಗಾದ್ರೂ ಅನುಮತಿ ನೀಡಲಿ, ರಾಜ್ಯದಾದ್ಯಂತ ಪ್ರವಾಸ ಮಾಡಿ ಜನರನ್ನ ಎಚ್ಚರಗೊಳಿಸುವ ಕಾರ್ಯ ಮಾಡುತ್ತೇನೆ ಎಂದು ಡಿಕೆಶಿ ಹೇಳುತ್ತಿದ್ದಾರೆ. ಒಂದು ವೇಳೆ ಕೊರೊನಾ ಸಮಯದಲ್ಲಿ ಕಾರ್ಯಕ್ರಮ ಮಾಡಿದ್ರೆ, ಕಾನೂನು ಉಲ್ಲಂಘನೆ ಆಗುತ್ತದೆ ಎಂದು ಹೇಳುತ್ತಾರೆ. ಅದು ಎಲ್ಲಿಯವರೆಗೆ ಹೋಗುತ್ತೆ ಎಂದು ನಾವು ನೋಡುತ್ತೇವೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವೆ ಉಮಾಶ್ರೀ ಗುಡುಗಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.