ETV Bharat / state

ಹಲ್ಲೆಗೊಳಗಾದ ಬಿಜೆಪಿ ಮುಖಂಡನ ಆರೋಗ್ಯ ವಿಚಾರಿಸಿದ ವಿಜಯೇಂದ್ರ; ಆರೋಪಿಗಳನ್ನು ಬಂಧಿಸುವಂತೆ ಆಗ್ರಹ - ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

ಹಲ್ಲೆಗೊಳಗಾಗ ಬಿಜೆಪಿ ಮುಖಂಡನನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವಂತೆ ಒತ್ತಾಯಿಸಿದರು.

bjp-leader-assaulted-in-belagavi-b-y-vijayendra-visited-hospital
ಹಲ್ಲೆಗೊಳಗಾದ ಬಿಜೆಪಿ ಮುಖಂಡನ ಆರೋಗ್ಯ ವಿಚಾರಿಸಿದ ವಿಜಯೇಂದ್ರ..ಆರೋಪಿಗಳನ್ನು ಬಂಧಿಸುವಂತೆ ಆಗ್ರಹ
author img

By ETV Bharat Karnataka Team

Published : Dec 4, 2023, 9:49 PM IST

Updated : Dec 4, 2023, 11:05 PM IST

ಹಲ್ಲೆಗೊಳಗಾದ ಬಿಜೆಪಿ ಮುಖಂಡನ ಆರೋಗ್ಯ ವಿಚಾರಿಸಿದ ವಿಜಯೇಂದ್ರ; ಆರೋಪಿಗಳನ್ನು ಬಂಧಿಸುವಂತೆ ಆಗ್ರಹ

ಬೆಳಗಾವಿ : ಬಿಜೆಪಿ ಮುಖಂಡನ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಇಂದು ರಾತ್ರಿಯೇ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಎಲ್ಲ ಆರೋಪಿಗಳನ್ನು ಬಂಧಿಸಬೇಕು. ಇಲ್ಲದಿದ್ದರೆ ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತ ಬೀದಿಗಳಿಯಬೇಕಾಗುತ್ತದೆ‌ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಎಚ್ಚರಿಸಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿ‌ ಹಲ್ಲೆಗೊಳಗಾದ ಪೃಥ್ವಿ ಸಿಂಗ್ ಆರೋಗ್ಯ ವಿಚಾರಿಸಿ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಎಸ್ಸಿ ಮೋರ್ಚಾ ಕಾರ್ಯಕರ್ತ ಪೃಥ್ವಿ ಸಿಂಗ್ ಮೇಲೆ ಹಾಡಹಗಲೇ ಹಲ್ಲೆ ನಡೆಸಲಾಗಿದೆ. ಅವರ ಮನೆಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಗನ್ ಮ್ಯಾನ್ ಮತ್ತು ಬಲಗೈ ಬಂಟ ಸುಜೀತ್ ಜಾಧವ್, ಸದ್ದಾಂ ಇವರೆಲ್ಲರೂ ಸೇರಿಕೊಂಡು ಹೋಗಿ ಹೊರಗಡೆ ಕರೆಸಿ ಮಾತಿನ ಚಕಮಕಿ ಮಾಡಿದ ಬಳಿಕ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಎಂಎಲ್ಸಿ ಕೂಡ ಕಾರಿನಲ್ಲಿ ಕುಳಿತಿದ್ದರು. ಈ ಘಟನೆಯನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದರು.

ಈ ಎಂಎಲ್ಸಿ ಬಹಳ ಪ್ರಭಾವಿ ವ್ಯಕ್ತಿ. ಅದರಲ್ಲೂ ಜಿಲ್ಲೆಯ ಪ್ರಭಾವಿ ಸಚಿವೆ ಸಹೋದರ ಆಗಿದ್ದರಿಂದಲೇ ಹಾಡಹಗಲೇ ಮಾರಣಾಂತಿಕ‌ ಹಲ್ಲೆ ಮಾಡಲು ಸಾಧ್ಯವಾಗಿದೆ. ಮೊಬೈಲ್ ಕಿತ್ತುಕೊಂಡು ಚೂರಿ‌ ಇರದಿದ್ದು ಖಂಡನೀಯ ಎಂದು ವಿಜಯೇಂದ್ರ ಕಿಡಿಕಾರಿದರು. ಪೃಥ್ವಿ ಸಿಂಗ್ ಭಯಭೀತಗೊಂಡಿದ್ದಾನೆ. ನಮ್ಮ ಕುಟುಂಬಕ್ಕೆ ರಕ್ಷಣೆ ಕೊಡಿ ಎಂದು ಕೇಳಿಕೊಂಡಿದ್ದಾರೆ. ಮನೆಗೆ ನುಗ್ಗಿ ಹಲ್ಲೆ ನಡೆಸಲು ಇವರು ಹೇಸುವುದಿಲ್ಲ ಎಂದು ನನ್ನ ಬಳಿ ಅಳಲು ತೋಡಿಕೊಂಡಿದ್ದಾನೆ ಎಂದು ವಿಜಯೇಂದ್ರ ತಿಳಿಸಿದರು.

ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಮುಖ್ಯಮಂತ್ರಿ ಆದಿಯಾಗಿ ಇಡೀ ಸರ್ಕಾರವೇ ಬೆಳಗಾವಿಯಲ್ಲಿದೆ. ಇಂತ ಸಂದರ್ಭದಲ್ಲಿ ಈ ರೀತಿ ದರ್ಪ ತೋರಿದ್ದು ಖಂಡನೀಯ. ಈ ವಿಚಾರದಲ್ಲಿ ನಾವು ಸುಮ್ಮನೆ ಕೂರುವುದಿಲ್ಲ. ತಕ್ಷಣವೇ ಪೊಲೀಸರು ತಡಮಾಡದೇ ಎಫ್ಐಆರ್ ದಾಖಲಿಸಬೇಕು. ಪ್ರಭಾವಿ ಸಚಿವೆಯ ಸಹೋದರನಾಗಿದ್ದರಿಂದ ಸ್ಥಳೀಯ ಪೊಲೀಸರ ಮೇಲೆ ಒತ್ತಡ ಹೇರುವ ಸಾಧ್ಯತೆಯಿದ್ದು, ನಾಳೆ ಏನು ಮಾಡುತ್ತೇವೆಂದು ಮುಖ್ಯಮಂತ್ರಿ ತಿಳಿಸಬೇಕು. ನಾಳೆ ಸದನದಲ್ಲಿ ಈ ಬಗ್ಗೆ ಧ್ವನಿ ಎತ್ತುವ ಬಗ್ಗೆ ನಿರ್ಧರಿಸುತ್ತೇವೆ ಎಂದರು.

ಪೊಲೀಸ್ ತನಿಖೆಯಲ್ಲಿ‌ ನಮಗೆ ವಿಶ್ವಾಸವಿಲ್ಲ. ಹಲ್ಲೆಗೆ ಕಾರಣ ಏನಾದರೂ ಇರಲಿ. ಒಂದು ಕ್ಷಣವೂ ತಡ ಮಾಡದೇ ಎಂಎಲ್ಸಿ ಮತ್ತು ಅವರ ಸಹಚರರನ್ನು ಬಂಧಿಸಬೇಕೆಂದು ಮುಖ್ಯಮಂತ್ರಿ ಮತ್ತು ಸರ್ಕಾರಕ್ಕೆ ವಿಜಯೇಂದ್ರ ಒತ್ತಾಯಿಸಿದ್ದಾರೆ. ರಾಜಕೀಯ ಪ್ರೇರಿತ ಎಂಬ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ವಿಚಾರ ಇದರ ಪ್ರಶ್ನೆ ಬರುವುದಿಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪೃಥ್ವಿ ಸಿಂಗ್ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ವೇಳೆ ಬೆದರಿಸುವ ಕೆಲಸ ಮಾಡಿದ್ದರು. ಲಕ್ಷ್ಮೀ ಹೆಬ್ಬಾಳ್ಕರ್ ಅವರೇ ತಮ್ಮ ತಮ್ಮನನ್ನು ಪೊಲೀಸ್ ಠಾಣೆಗೆ ಕರೆ ತರಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ : ರಮೇಶ ಜಾರಕಿಹೊಳಿ ಆಪ್ತನ ಮೇಲೆ ಹಲ್ಲೆ ಪ್ರಕರಣ: ಕೂಲಂಕಷ ತನಿಖೆ ಆಗಲಿ ಎಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Last Updated : Dec 4, 2023, 11:05 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.