ETV Bharat / state

ಎಲ್ಲಾ ಗ್ರಾ.ಪಂಗಳಲ್ಲಿ ಬಿಜೆಪಿಯ ನಾಯಕರನ್ನು ಗೆಲ್ಲಿಸಬೇಕಿದೆ: ಕವಟಗಿಮಠ - ಗ್ರಾಮ ಸ್ವರಾಜ್ಯ ಕಾರ್ಯಕ್ರಮ

ಜನರ ಅಭಿಪ್ರಾಯದ ಮೇರೆಗೆ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು. ಬೆಳಗಾವಿ, ಬೈಲಹೊಂಗಲ ಹಾಗೂ ಖಾನಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿಲ್ಲ. ಹೀಗಾಗಿ ಆ ಮೂರು ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ವಿಧಾನ ಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು.

ಮಹಾಂತೇಶ ಕವಟಗಿಮಠ
ಮಹಾಂತೇಶ ಕವಟಗಿಮಠ
author img

By

Published : Dec 2, 2020, 4:35 PM IST

ಬೆಳಗಾವಿ: ಪ್ರಾಮಾಣಿಕವಾಗಿ ಜನರ ಸಮಸ್ಯೆಗಳನ್ನು ಕೇಳುವಂತಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕೆಂದು ವಿಧಾನ ಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಸಲಹೆ ನೀಡಿದರು.

ಇಲ್ಲಿನ ಧರ್ಮನಾಥ ಭವನದಲ್ಲಿ ಹಮ್ಮಿಕೊಂಡಿದ್ದ ಗ್ರಾಮ ಸ್ವರಾಜ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷದಿಂದ ಪ್ರಾಮಾಣಿಕ ಅಭ್ಯರ್ಥಿಗಳ ಆಯ್ಕೆ ಮಾಡಬೇಕು. ವಾರ್ಡ್ ಜನರ ಅಭಿಪ್ರಾಯದ ಮೇರೆಗೆ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು. ಬೆಳಗಾವಿ, ಬೈಲಹೊಂಗಲ ಹಾಗೂ ಖಾನಾಪುರ ವಿಧಾನ ಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿಲ್ಲ. ಹೀಗಾಗಿ ಆ ಮೂರು ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಗ್ರಾಮ ಸ್ವರಾಜ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಮಹಾಂತೇಶ ಕವಟಗಿಮಠ

ಆಯಾ ಕ್ಷೇತ್ರದ ಎಲ್ಲಾ ಗ್ರಾ.ಪಂಗಳಲ್ಲಿ ಬಿಜೆಪಿಯ ಪ್ರಾಮಾಣಿಕ ನಾಯಕರನ್ನು ಗೆಲ್ಲಿಸಬೇಕಿದೆ. ಆದರೆ, ನಾಯಕರು ಬರೀ ಆಪ್ತರನ್ನೇ ಆಯ್ಕೆ ಮಾಡದೇ ಮತದಾರರು ಬಯಸುವ ಗುಣಗಳನ್ನು ಹೊಂದಿರುವವರಿಗೆ ಪ್ರಾಶಸ್ತ್ಯ ನೀಡಬೇಕು. ಪಂಚಾಯಿತಿಯಿಂದ ಪಾರ್ಲಿಮೆಂಟ್‌ವರೆಗೂ ಪಕ್ಷದ ಕಾರ್ಯಕರ್ತರನ್ನು ಬೆಳೆಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಸರ್ಕಾರ, ದೇಶದಲ್ಲಿ ನರೇಂದ್ರ ಮೋದಿ ಸರ್ಕಾರದ ಜನಪರ ಯೋಜನೆಗಳನ್ನು ಬೂತ್ ಮಟ್ಟದಲ್ಲಿ ಜನತೆಗೆ ತಿಳಿಯಪಡಿಸಿ, ಬಿಜೆಪಿಯನ್ನು ಮತ್ತಷ್ಟು ಬೇರು ಮಟ್ಟದಲ್ಲಿ ಬಲಿಷ್ಠಪಡಿಸಬೇಕು ಎಂದು ಹೇಳಿದರು.‌

ETV Bharat Logo

Copyright © 2025 Ushodaya Enterprises Pvt. Ltd., All Rights Reserved.