ಬೆಳಗಾವಿ: ಯತ್ನಾಳ್ ಹೇಳಿಕೆ ಬಗ್ಗೆ ಮೊದಲೇ ಹೇಳಿದ್ದೇನೆ. ಅವರ ಹೇಳಿಕೆಯಲ್ಲಿ ಏನೂ ಧಮ್ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.
ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಸಭೆ ನಡೆಸುವ ನಿಮಿತ್ತ ಬೆಳಗಾವಿಗೆ ಅರುಣ್ ಸಿಂಗ್ ಆಗಮಿಸಿದ್ದಾರೆ. ಈ ವೇಳೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ ಉಪಚುನಾವಣೆ ಕುರಿತಾಗಿ ಹಲವು ಸಭೆಗಳನ್ನು ನಡೆಸಲಿದ್ದೇನೆ. ಒಂದು ಲೋಕಸಭೆ ಹಾಗೂ ಎರಡು ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪಂಚರಾಜ್ಯಗಳ ಪೈಕಿ ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ರಚನೆ ನಿಶ್ಚಿತವಾಗಿದೆ. ಪಶ್ಚಿಮ ಬಂಗಾಳದಲ್ಲಿ 200ಕ್ಕೂ ಹೆಚ್ಚು ಸೀಟ್ ಗೆದ್ದು ಬಿಜೆಪಿ ನೇತೃತ್ವದ ಸರ್ಕಾರ ರಚಿಸುತ್ತೇವೆ. ತಮಿಳುನಾಡು ಮತ್ತು ಪುದುಚೇರಿಯಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಕೇರಳದಲ್ಲಿ ಉತ್ತಮ ಪ್ರದರ್ಶನ ನೀಡಲಿದ್ದೇವೆ ಎಂದರು.
ಮತದಾನ ಬಳಿಕ ರಾಜಕೀಯ ಬದಲಾವಣೆ ಎಂಬ ಯತ್ನಾಳ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ. ಹೌದು ಮತದಾನ ಬಳಿಕ ಮೂರು ಸೀಟ್ ಗೆದ್ದು ಬಿಜೆಪಿ ಮತ್ತಷ್ಟು ಗಟ್ಟಿಯಾಗುತ್ತದೆ. ಸರ್ಕಾರ ಮತ್ತಷ್ಟು ಗಟ್ಟಿಯಾಗಿ ಉತ್ಸಾಹದಿಂದ ಕಾರ್ಯಕರ್ತರು ಕೆಲಸ ಮಾಡುತ್ತಾರೆ ಎಂದು ಹೇಳಿದರು.