ETV Bharat / state

ಡ್ರಗ್ಸ್​ ದಂಧೆ ಮಟ್ಟ ಹಾಕಲು ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

author img

By

Published : Sep 11, 2020, 3:37 PM IST

ಡ್ರಗ್ಸ್ ದಂಧೆ ಮಟ್ಟ ಹಾಕುವಲ್ಲಿ ಪೊಲೀಸ್ ಇಲಾಖೆ ಮತ್ತು ರಾಜ್ಯ ಸರ್ಕಾರದ ಬದ್ಧತೆ ಪ್ರಶಂಸನೀಯ. ರಾಜ್ಯದಲ್ಲಿ ಅವ್ಯಾಹತವಾಗಿ ಬೆಳೆದಿರುವ ಗಾಂಜಾ ಮತ್ತು ಡ್ರಗ್ಸ್ ಮಾಫಿಯಾದಲ್ಲಿ ಯಾರೇ ಪ್ರಭಾವಿಗಳಿದ್ರೂ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು..

BJP Yuvamorcha activists call for stringent action against drug dealers
ಬಿಜೆಪಿ ಯುವಮೋರ್ಚಾ ಕಾರ್ಯಕರ್ತರ ಆಗ್ರಹ

ಬೆಳಗಾವಿ : ಡ್ರಗ್ಸ್ ದಂಧೆಯಲ್ಲಿ ಭಾಗಿಯಾದವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.

ಬಿಜೆಪಿ ಯುವಮೋರ್ಚಾ ಕಾರ್ಯಕರ್ತರ ಆಗ್ರಹ..

ಕಳೆದ ಕೆಲವು ದಿನಗಳಿಂದ ರಾಜ್ಯದ ನೆಮ್ಮದಿ ಮತ್ತು ಹೆಸರನ್ನು ಕೆಡಿಸಿದ್ದ ಮಾದಕ ವಸ್ತು ಮಾರಾಟ ಜಾಲ ಪತ್ತೆ ಹಾಗೂ ಸೇವನೆ ವಿರುದ್ಧ ಸಿಎಂ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಕಟ್ಟುನಿಟ್ಟಾದ ಕ್ರಮ ಕೈಗೊಂಡಿರುವುದು ಹೆಮ್ಮೆಯ ಸಂಗತಿ. ಡ್ರಗ್ಸ್ ದಂಧೆ ಮಟ್ಟ ಹಾಕುವಲ್ಲಿ ಪೊಲೀಸ್ ಇಲಾಖೆ ಮತ್ತು ರಾಜ್ಯ ಸರ್ಕಾರದ ಬದ್ಧತೆ ಪ್ರಶಂಸನೀಯ.

ರಾಜ್ಯದಲ್ಲಿ ಅವ್ಯಾಹತವಾಗಿ ಬೆಳೆದಿರುವ ಗಾಂಜಾ ಮತ್ತು ಡ್ರಗ್ಸ್ ಮಾಫಿಯಾದಲ್ಲಿ ಯಾರೇ ಪ್ರಭಾವಿ ವ್ಯಕ್ತಿಗಳಿದ್ರೂ ಅವರಿಗೆ ಬಗ್ಗದೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಬೆಳಗಾವಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪ್ರಸಾದ ದೇವರಮನಿ, ರಾಜು ಚಿಕ್ಕನಗೌಡರ, ದಿಗ್ವಿಜಯ ಸಿದ್ನಾಳ್, ಮಹಾದೇವ ದರೆಣ್ಣವರ ಇದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.