ಅಥಣಿ (ಬೆಳಗಾವಿ): ತಾಲೂಕಿನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಮತ ಎಣಿಕೆ ಕೇಂದ್ರದ ಬಳಿ ವಾಮಾಚಾರ ನಡೆದಿರುವುದು ಪತ್ತೆಯಾಗಿದೆ. ಇಲ್ಲಿನ ಖಾಸಗಿ ಶಿಕ್ಷಣ ಸಂಸ್ಥೆ ಕಾಲೇಜುಗಳಲ್ಲಿ ಮತ ಏನಿಕೆ ಕಾರ್ಯ ನಡೆಯುತ್ತಿದ್ದರೆ, ಇತ್ತ ಹೊರ ಭಾಗದಲ್ಲಿ ವಾಮಾಚಾರ ನಡೆದಿರುವುದು ಬಯಲಿದೆ ಬಂದಿದೆ.
ಅಭ್ಯರ್ಥಿಗಳು ಗೆಲುವು ಸಾಧಿಸಲು ಮಾಟ ಮಂತ್ರದ ಮೊರೆ ಹೋಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಮತ ಎಣಿಕೆ ಕೇಂದ್ರದ ಬಳಿ ವಾಮಾಚಾರಕ್ಕೆ ಬಳಸುವ ವಸ್ತುಗಳು ಪತ್ತೆಯಾಗಿದೆ. ಗ್ರಾಮ ಪಂಚಾಯಿತಿ ಚುನಾವಣೆ ಪ್ರತಿಷ್ಠೆಯ ಕಣವಾಗಿದ್ದು, ಕೆಲವು ಅಭ್ಯರ್ಥಿಗಳು ಗೆಲ್ಲಲು ವಾಮಮಾರ್ಗ ಹಿಡಿದಿದ್ದಾರೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
ಇದನ್ನೂ ಓದಿ: ಮೂರು ದಿನಗಳ ಹಿಂದಷ್ಟೇ ಮೃತಪಟ್ಟಿದ್ದ ಅಭ್ಯರ್ಥಿಗೆ ಭರ್ಜರಿ ಗೆಲುವು