ಬೆಳಗಾವಿ: ಸಂತೆಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ಮಹಿಳೆ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಹಿರೇಬಾಗೇವಾಡಿಯಲ್ಲಿ ನಡೆದಿದೆ.
ಶೋಭಾ ತಳವಾರ (42) ಮೃತ ಮಹಿಳೆ. ಗ್ರಾಮದ ಗುಳ್ಳವನ ಕೆರೆಯಲ್ಲಿ ಅನುಮಾನಾಸ್ಪದವಾಗಿ ಶವ ಪತ್ತೆಯಾಗಿದೆ. ಸೆ. 15ರಂದು ಸಂತೆಗೆ ಹೋಗಿ ಬರುವುದಾಗಿ ತೆರಳಿದ್ದ ಶೋಭಾ ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಇದರಿಂದ ಗಾಬರಿಯಾದ ಕುಟುಂಬಸ್ಥರು, ಸಂಬಂಧಿಕರಿಗೆ ಹಾಗೂ ಪರಿಚಯಸ್ಥರಿಗೆ ಫೋನ್ ಮಾಡಿ ವಿಚಾರಿಸಿದ್ದಾರೆ.
ನಂತರ ಶೋಭಾ ಸುಳಿವು ಸಿಗದಿದ್ದಾಗ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದಾರೆ. ಈಗ ಶೋಭಾ ತಳವಾರ ಶವ ಕೆರೆಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಮುಂದುವರೆಸಿದ್ದಾರೆ.