ETV Bharat / state

ಬೆಳಗಾವಿಯಲ್ಲಿ ಹರಿದ ನೆತ್ತರು.. ಕ್ಷುಲ್ಲಕ ಕಾರಣಕ್ಕೆ ತಮ್ಮನನ್ನೇ ಕೊಂದ ಅಣ್ಣ! - ಕ್ಷುಲ್ಲಕ ಕಾರಣಕ್ಕೆ ತಮ್ಮನನ್ನೇ ಕೊಲೆ ಮಾಡಿದ ಅಣ್ಣ

ಬೆಳಗಾವಿಯಲ್ಲಿ ನೆತ್ತರು ಹರಿದಿದೆ. ನಿನ್ನೆ ರಾತ್ರಿ ಲಕ್ಷ್ಮೀ ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ಅಣ್ಣನೇ ತನ್ನ ಸ್ವಂತ ತಮ್ಮನನ್ನು ಕೊಲೆ ಮಾಡಿದ್ದಾನೆ.

ತಮ್ಮನನ್ನೇ ಕೊಲೆ ಮಾಡಿದ ಅಣ್ಣ
ತಮ್ಮನನ್ನೇ ಕೊಲೆ ಮಾಡಿದ ಅಣ್ಣ
author img

By

Published : Aug 7, 2021, 9:43 AM IST

Updated : Aug 7, 2021, 10:10 AM IST

ಬೆಳಗಾವಿ : ಕ್ಷುಲ್ಲಕ ಕಾರಣಕ್ಕೆ ಶುರುವಾದ ಅಣ್ಣ ತಮ್ಮಂದಿರ ಜಗಳ ಕಿರಿಯ ಸಹೋದರನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಶುಕ್ರವಾರ ರಾತ್ರಿ ಲಕ್ಷ್ಮೀ ನಗರದಲ್ಲಿ ನಡೆದಿದೆ. ಮೂಲತಃ ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ ಖಾನಾಪುರ ನಿವಾಸಿ ಬಸವರಾಜ ತಳವಾರ (41) ಕೊಲೆಯಾದ ವ್ಯಕ್ತಿ. ರಾಜು ತಳವಾರ (46) ಕೊಲೆ ಆರೋಪಿ.

ಬಸವರಾಜ ತಳವಾರ ಸದ್ಯ ಮಚ್ಚೆ ನಗರದ ಲಕ್ಷ್ಮೀ ಗಲ್ಲಿಯಲ್ಲಿ ವಾಸಿಸುತ್ತಿದ್ದರು. ಕೊಲೆಗೆ ನಿಖರ ಕಾರಣ ಈವರೆಗೂ ತಿಳಿದುಬಂದಿಲ್ಲ. ಆದರೆ, ಸಹೋದರನ ಕೊಲೆಗೆ ಆಸ್ತಿ ವಿವಾದ ಹಾಗೂ ತಾಯಿಯ ಪಿಂಚಣಿ ಹಣವೇ ಕಾರಣ ಎನ್ನಲಾಗುತ್ತಿದ್ದು, ಪೊಲೀಸರ ತನಿಖೆ ನಂತರವಷ್ಟೇ ಸತ್ಯಾಸತ್ಯತೆ ತಿಳಿಯಲಿದೆ.

ಸ್ಥಳಕ್ಕೆ ವಡಗಾಂವ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಕುರಿತು ವಡಗಾಂವ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಆಸ್ಪತ್ರೆಯಿಂದ ಮನೆಗೆ ತೆರಳುವಾಗ ಅಪಘಾತ: ತಂದೆ-ತಾಯಿ, ಮಗು ಸೇರಿ ಐವರ ದುರ್ಮರಣ

Last Updated : Aug 7, 2021, 10:10 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.