ಚಿಕ್ಕೋಡಿ: ಕರ್ನಾಟಕ ಗಡಿಯಲ್ಲಿರುವ ಮಹಾರಾಷ್ಟ್ರದ ಸಾಂಗಲಿ ಹಾಗೂ ಮಿರಜ ಪಟ್ಟಣಗಳಿಗೆ ಚಿಕ್ಕೋಡಿ ಉಪವಿಭಾಗದಿಂದ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭವಾಗಿದೆ ಎಂದು ಚಿಕ್ಕೋಡಿ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಶಶಿಧರ ಬಿ.ಎಂ. ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ, ಕಾಗವಾಡ, ರಾಯಬಾಗ, ನಿಪ್ಪಾಣಿ ಹಾಗೂ ಚಿಕ್ಕೋಡಿ ತಾಲೂಕಿನ ವಿವಿಧ ಗ್ರಾಮಗಳ ಜನರು ಮಹಾರಾಷ್ಟ್ರದ ಸಾಂಗಲಿ ಹಾಗೂ ಮಿರಜ ಪಟ್ಟಣದ ಆಸ್ಪತ್ರೆಗಳ ಮೇಲೆ ಅವಲಂಬಿತರಾಗಿದ್ದಾರೆ. ಹೀಗಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ಬಸ್ ಸಂಚಾರ ಆರಂಭಿಸಲಾಗಿದೆ.
ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆ ಹಾಗೂ ವಿವಿಧ ತಾಲೂಕುಗಳಿಗೂ ಜೂ.28 ರಿಂದ ಚಿಕ್ಕೋಡಿಯಿಂದ ಬಸ್‌ಗಳು ಸಂಚರಿಸಲಿವೆ. ಚಿಕ್ಕೋಡಿ ಉಪವಿಭಾಗದಲ್ಲಿ ಸದ್ಯ ಶೇ 60 ಬಸ್‌ಗಳು ಸಂಚರಿಸುತ್ತಿದ್ದು, ಪ್ರಯಾಣಿಕರು ಮಾತ್ರ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸುತ್ತಿಲ್ಲ ಎಂದು ತಿಳಿಸಿದರು.