ಅಥಣಿ: ಅಥಣಿ ವಿಧಾನಸಭಾ ಮತಕ್ಷೇತ್ರಕ್ಕೆ ಬಿಜೆಪಿಯಿಂದ ಲಕ್ಷ್ಮಣ್ ಸವದಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿ ಹಮ್ಮಿಕೊಂಡಿದ್ದ ಬೆಂಬಲಿಗರ ಬೃಹತ್ ಪ್ರತಿಭಟನೆ ರದ್ದಾಗಿದೆ.
ಅಥಣಿ ನಗರದ ಸಿದ್ದೇಶ್ವರ ಮಂದಿರದಿಂದ ಪಾದಯಾತ್ರೆ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಹಿಂಪಡೆಯುವಂತೆ ಡಿಸಿಎಂ ಸವದಿ ತಾಕೀತು ಮಾಡಿದ ಹಿನ್ನೆಲೆ ಪ್ರತಿಭಟನೆಯನ್ನು ರದ್ದುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
ಸವದಿ ಬೆಂಬಲಿಗರ ಪ್ರತಿಭಟನೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ 130 ಕ್ಕೂ ಹೆಚ್ಚು ಪೋಲಿಸ್ ಸಿಬ್ಬಂದಿ ನಿಯೋಜಿಸಲಾಗಿತ್ತು. ಆದ್ರೆ ಲಕ್ಷ್ಮಣ್ ಸವದಿ ತಮ್ಮ ಕಾರ್ಯಕರ್ತರಿಗೆ ಪ್ರತಿಭಟನೆ ನಡೆಸದಂತೆ ಸೂಚನೆ ನೀಡಿದ ಹಿನ್ನೆಲೆ ಸದ್ಯ ಪ್ರತಿಭಟನೆ ರದ್ದಾಗಿದೆ.