ಚಿಕ್ಕೋಡಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಣಗಲಾ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ವೈಭವ ವಾಡ್ಕರ್(21) ಮತ್ತು ದಿಗ್ವಿಜಯ ಪಾಟೀಲ್(30) ಮೃತರು. ಉಳಿದಂತೆ ಕಾರಿನಲ್ಲಿದ್ದ 9 ಜನರಿಗೆ ಗಂಭೀರ ಗಾಯಗಳಾಗಿದ್ದು,ಮಹಾರಾಷ್ಟ್ರದ ಕೊಲ್ಹಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋವಾ ಪ್ರವಾಸಕ್ಕೆಂದು ಬೆಳಗಾವಿ ಮಾರ್ಗವಾಗಿ ತೆರಳವಾಗ ಈ ಅಪಘಾತ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಸಂಕೇಶ್ವರ ಪೊಲೀಸರು ಭೇಟಿ ನೀಡಿ,ಪರಿಶೀಲನೆ ನಡೆಸಿದ್ದಾರೆ.