ಬೆಳಗಾವಿ: ಖಾನಾಪುರ ತಾಲೂಕಿನ ಜಾಂಬೋಟಿ ಸಮೀಪದಲ್ಲಿ ಭಾನುವಾರ ಸಂಜೆ ವೇಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹೆಚ್ಚಿನ ವೇಗದಲ್ಲಿ ಕಾರ್ ಚಲಾಯಿಸಿದ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿದ ಕಾರ್ ಸ್ಕಿಡ್ ಆಗಿರುವ ಪರಿಣಾಮ ಪಲ್ಟಿಯಾಗಿದೆ. ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದ ನಾಲ್ವರು ಗೋಕಾಕ್ ಮೂಲದವರು ಎನ್ನಲಾಗಿದೆ. ಅದರಲ್ಲಿ ಮೂವರಿಗೂ ಗಂಭೀರ ಗಾಯಗಳಾಗಿದೆ. ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಖಾನಾಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅವಘಡ ಸಂಭವಿಸಿದೆ. ಈವರೆಗೂ ಪ್ರಕರಣ ದಾಖಲಾಗಿಲ್ಲ ಎಂದು ಖಾನಾಪೂರ ಪೊಲೀಸರು ತಿಳಿಸಿದ್ದಾರೆ.