ETV Bharat / state

ಬೆಳಗಾವಿಯಲ್ಲಿ ಭೀಕರ ಸರಣಿ ರಸ್ತೆ ಅಪಘಾತ.. ಎಎಸ್ಐ ಪತ್ನಿ, ಪುತ್ರಿ, ಕಾರು ಚಾಲಕ, ಓರ್ವ ಅಜ್ಜಿ ಸೇರಿ ನಾಲ್ವರು ಸಾವು - Accident between lorry and car in Belgavi

ಬೆಳಗಾವಿ ಬಾಗಲಕೋಟೆ ರಸ್ತೆಯ ಬೂದಿಗೊಪ್ಪ ಕ್ರಾಸ್ ಬಳಿ ಕಾರು, ಬೈಕ್ ಹಾಗೂ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ನಡುವೆ ಅಪಘಾತವಾಗಿದೆ‌.

ಬೆಳಗಾವಿಯಲ್ಲಿ ಭೀಕರ ಸರಣಿ ರಸ್ತೆ ಅಪಘಾತ
ಬೆಳಗಾವಿಯಲ್ಲಿ ಭೀಕರ ಸರಣಿ ರಸ್ತೆ ಅಪಘಾತ
author img

By

Published : Sep 25, 2022, 3:22 PM IST

Updated : Sep 25, 2022, 5:38 PM IST

ಬೆಳಗಾವಿ: ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕುಡುಚಿ ಪೊಲೀಸ್ ಠಾಣೆಯ ಎಎಸ್ಐ ವೈ. ಎಂ ಹಲಕಿಯವರ ಪತ್ನಿ, ಪುತ್ರಿ ಹಾಗೂ ಚಾಲಕ, ಓರ್ವ ಅಜ್ಜಿ ಸೇರಿ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರವಾದ ಗಾಯಗಳಾದ ಘಟನೆ ಬುದಿಗೊಪ್ಪ ಕ್ರಾಸ್ ಬಳಿ ಇಂದು ಸಂಭವಿಸಿದೆ. ಕಾರು ಡ್ರೈವರ್ ನಿಖಿಲ್ ಕದಂ(24), ಬೆಳಗಾವಿ ನಿವಾಸಿ ರುಕ್ಮಿಣಿ ಹಳಕಿ(48), ಅಕ್ಷತಾ ಹಳಕಿ(22), ವೃದ್ಧೆ ಹನುಮವ್ವಾ ಚಿಕ್ಕಲಕಟ್ಟಿ ಮೃತಪಟ್ಟವರು.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್ ಬಳಿ ಕಾರು, ಬೈಕ್ ಹಾಗೂ ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ‌. ಅಪಘಾತದಲ್ಲಿ ಕುಡಚಿ ಪೊಲೀಸ್ ಠಾಣೆ ಎಎಸ್ಐ ವೈ. ಎಂ ಹಲಕಿರವರ ಪತ್ನಿ, ಪುತ್ರಿ ಹಾಗೂ ಚಾಲಕ ಸೇರಿ ಬೈಕ್ ಮೇಲೆ ಹೋಗುತ್ತಿದ್ದ ಓರ್ವ ಅಜ್ಜಿ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿದೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

ಬೆಳಗಾವಿಯಲ್ಲಿ ಭೀಕರ ಸರಣಿ ರಸ್ತೆ ಅಪಘಾತ

ಬೆಳಗಾವಿ ಬಾಗಲಕೋಟೆ ರಸ್ತೆಯ ಬೂದಿಗೊಪ್ಪ ಕ್ರಾಸ್ ಬಳಿ ಕಾರು, ಬೈಕ್ ಹಾಗೂ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ನಡುವೆ ಅಪಘಾತವಾಗಿದೆ‌. ಕಾರಿನಲ್ಲಿ ಯರಗಟ್ಟಿಯತ್ತ ತೆರಳುತ್ತಿದ್ದ ಎಎಸ್ಐ ಕುಟುಂಬದಲ್ಲಿ ಮೂವರು ಮೃತರಾಗಿದ್ದಾರೆ. ಬೈಕ್​ನಲ್ಲಿ ಹೋಗುತ್ತಿದ್ದ ಓರ್ವ ಅಜ್ಜಿ ಸಾವನ್ನಪ್ಪಿದ್ದಾರೆ.

ಇನ್ನು, ಲಾರಿ ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ‌. ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಬೆಳಗಾವಿ ಎಸ್‌ಪಿ ಡಾ ಸಂಜೀವ್ ಪಾಟೀಲ್, ಮುರಗೋಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಓದಿ: ಭೀಕರ ರಸ್ತೆ ಅಪಘಾತ: ನಾಲ್ವರು ಕೂಲಿ ಕಾರ್ಮಿಕರ ದುರ್ಮರಣ, 12 ಮಂದಿಗೆ ಗಾಯ

Last Updated : Sep 25, 2022, 5:38 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.