ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ನದಿಗೆ ಬಿದ್ದ ಘಟನೆ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದ ದೂಧಗಂಗಾ ಸೇತುವೆ ಬಳಿ ನಡೆದಿದೆ. ಘಟನೆಯಲ್ಲಿ ವಾಹನದಲ್ಲಿದ್ದ ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಶಂಕೆ ವ್ಯಕ್ತವಾಗಿದೆ.
ಬೆಳಗಾವಿಯಿಂದ ಪುಣೆಗೆ ತೆರಳುವ ಸಂದರ್ಭದಲ್ಲಿ ಯಕ್ಸಂಬಾ - ದಾನವಾಡ ಸೇತುವೆ ಮೇಲಿಂದ ಕಾರು ನದಿಗೆ ಬಿದ್ದಿದೆ. ಕಾರಿನಲ್ಲಿ ಒಬ್ಬನೇ ಪ್ರಯಾಣಿಸುತ್ತಿದ್ದ ಎಂದು ಹೇಳಲಾಗುತ್ತಿದ್ದು, ನದಿಗೆ ಬಿದ್ದ ತಕ್ಷಣ ಕಾರಿನ ಗಾಜನ್ನು ಒಡೆದು ಚಾಲಕ ಹೊರಗೆ ಬಂದು ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಮಹಾರಾಷ್ಟ್ರದ ನೋಂದಣಿ ಹೊಂದಿರುವ (MH 09 UF 5087) ವಾಹನ ಇದಾಗಿದ್ದು, ಗ್ರಾಮಸ್ಥರು ಟ್ರ್ಯಾಕ್ಟರ್ ಮೂಲಕ ಕಾರನ್ನು ಮೇಲೆತ್ತಿದ್ದಾರೆ. ಸೇತುವೆಗೆ ತಡೆಗೋಡೆ ಇಲ್ಲದಿರುವುದೇ ಘಟನೆಗೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ನಂಜನಗೂಡು: ಕಪಿಲಾ ನದಿಯಲ್ಲಿ ಈಜಲು ಹೋದ ಯುವಕ ಶವವಾಗಿ ಪತ್ತೆ