ಚಿಕ್ಕೋಡಿ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಪರಿಣಾಮ, ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕಾಗವಾಡ ತಾಲೂಕಿನ ಕಾತ್ರಾಳ ಗ್ರಾಮದ ಬಳಿ ನಡೆದಿದೆ.
ಕಾಗವಾಡ ತಾಲೂಕಿನ ಕೃಷ್ಣಾಕಿತ್ತೂರ ಗ್ರಾಮದ ಮಹಾದೇವ ಪಾಟೀಲ್ (28) ಅಥಣಿಯಿಂದ ಐನಾಪೂರಗೆ ತೆರಳುವಾಗ ದಾರಿ ಮಧ್ಯದಲ್ಲಿ ಅಪಘಾತ ಸಂಭವಿಸಿದೆ. ಪರಿಣಾಮ ಆತ ಸ್ಥಳದಲ್ಲಿಯೇ ಸಾವನಪ್ಪಿದ್ದಾನೆ. ಘಟನೆಯಲ್ಲಿ ಇನ್ನೋರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಚಿಕಿತ್ಸೆಗಾಗಿ ಮಹಾರಾಷ್ಟ್ರದ ಮೀರಜ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಈ ಕುರಿತು ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.