ETV Bharat / state

ಐನಾಪುರ ಪಟ್ಟಣದ ಜನತೆಯ ಮೇಲೆ ಸಿಸಿ ಕ್ಯಾಮೆರಾಗಳ ಹದ್ದಿನ ಕಣ್ಣು

ಇದರಿಂದ ಪಟ್ಟಣದಲ್ಲಿ ನಡೆಯುವ ಅಕ್ರಮಗಳನ್ನು ತಡೆಗಟ್ಟಲು ಸಹಕಾರಿಯಾಗುವುದರ ಜೊತೆಗೆ ಲಾಕ್‍ಡೌನ್ ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ಅನುಕೂಲವಾಗಲಿದೆ..

ಐನಾಪೂರ ಪಟ್ಟಣ ಪಂಚಾಯಿತಿ ಕಾರ್ಯಾಲಯ
ಐನಾಪೂರ ಪಟ್ಟಣ ಪಂಚಾಯಿತಿ ಕಾರ್ಯಾಲಯ
author img

By

Published : Jul 21, 2020, 7:42 PM IST

ಚಿಕ್ಕೋಡಿ : ಮಹಾಮಾರಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದನ್ನು ತಡೆಗಟ್ಟಲು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಐನಾಪುರ ಪಟ್ಟಣದಲ್ಲಿ ಸಿಸಿ ಕ್ಯಾಮೆರಾಗಳ ಮೂಲಕ ಹದ್ದಿನ ಕಣ್ಣಿಡಲಾಗಿದೆ ಎಂದು ಐನಾಪೂರ ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಎ ಆರ್ ಕುಲಕರ್ಣಿ ತಿಳಿಸಿದ್ದಾರೆ.

ಐನಾಪೂರ ಪಟ್ಟಣ ಪಂಚಾಯತ್‌ ಕಾರ್ಯಾಲಯ

ಐನಾಪುರ ಪಟ್ಟಣದ 19 ವಾರ್ಡ್​ಗಳಲ್ಲಿ ಸುಮಾರು 20 ಸಾವಿರಕ್ಕೂ ಅಧಿಕ ಜನಸಂಖ್ಯೆಯಿದೆ. ಪ್ರತಿ ವಾರ್ಡ್​ಗಳ ಆಯಕಟ್ಟಿನ ಹಾಗೂ ಜನದಟ್ಟನೆಯ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಇದರಿಂದ ಪಟ್ಟಣದಲ್ಲಿ ನಡೆಯುವ ಅಕ್ರಮಗಳನ್ನು ತಡೆಗಟ್ಟಲು ಸಹಕಾರಿಯಾಗುವುದರ ಜೊತೆಗೆ ಲಾಕ್‍ಡೌನ್ ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ಅನುಕೂಲವಾಗಲಿದೆ ಎಂದರು.

ಐನಾಪುರ ಪಟ್ಟಣದಲ್ಲಿ ಕಳೆದ ವಾರವಷ್ಟೇ ಇಬ್ಬರಲ್ಲಿ ಸೋಂಕು ಕಂಡು ಬಂದಿದೆ. ಇಂದು ಒಂದೇ ಕುಟುಂಬದ 9 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈಗಾಗಲೇ ಪಟ್ಟಣದ ಎಲ್ಲ ವಾರ್ಡ್​ಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಯಾರು ಕೋವಿಡ್ ಕಾಯ್ದೆ ಉಲ್ಲಂಘನೆ ಮಾಡುತ್ತಾರೋ, ಅವರಿಗೆ ದಂಡ ವಿಧಿಸಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.