ಬೆಳಗಾವಿ: ಕಾಂಗ್ರೆಸ್ಸಿಗೆ ರಾಜೀನಾಮೆ ನೀಡುವುದಾಗಿ ರಮೇಶ್ ಜಾರಕಿಹೊಳಿ ಹೇಳಿಕೆ ನೀಡುತ್ತಿದ್ದಂತೆ ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ರಮೇಶ್ ಜಾರಕಿಹೊಳಿ ಪರ ಬೆಂಬಲಿಗರು ಘೋಷಣೆ ಕೂಗಿದರು.
ಮಧ್ಯಾಹ್ನ ಸಚಿವ ಸತೀಶ ಜಾರಕಿಹೊಳಿ ಅಂಕಲಗಿ ಗ್ರಾಮಕ್ಕೆ ಭೇಟಿ ನೀಡಿದ್ದರು. ಈ ವೇಳೆ ಗ್ರಾಮದಿಂದ ಸತೀಶ್ ಜಾರಕಿಹೊಳಿ ಅವರ ವಾಹನ ಹೊರಡುತ್ತಿದ್ದಂತೆ ರಮೇಶ್ ಬೆಂಬಲಿಗರು ಮೋದಿ ಪರ ಘೋಷಣೆ ಕೂಗಿದರು. ಒಂದು ಮತ, ಎರಡು ಸರ್ಕಾರ. ವೋಟ್ ಫಾರ್ ಮೋದಿ. ಜೈ ರಮೇಶ್ ಜಾರಕಿಹೊಳಿ ಎಂದು ಘೋಷಣೆ ಕೂಗಿದರು.
ಈ ವೇಳೆ ರಮೇಶ್ ಜಾರಕಿಹೊಳಿ ಗೂಂಡಾ ರಾಜಕಾರಣ ಮಾಡುತ್ತಿದ್ದಾರೆ ಎಂಬ ಹೇಳಿಕೆಗೆ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದರು.