ETV Bharat / state

ಗಣರಾಜ್ಯೋತ್ಸವ ಪಥಸಂಚಲನದಲ್ಲಿ ರಾಜ್ಯದ ಸ್ತಬ್ದಚಿತ್ರಗಳಿಗೆ ಅವಕಾಶ ನಿರಾಕರಿಸಿ ಕನ್ನಡಿಗರಿಗೆ ಅಪಮಾನ: ಸಿಎಂ ಕಿಡಿ

ಗಣರಾಜ್ಯೋತ್ಸವ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಿಸಲಾಗಿದೆ ಎಂದು ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ದೂರಿದ್ದಾರೆ.

Etv Bharat
Etv Bharat
author img

By ETV Bharat Karnataka Team

Published : Jan 9, 2024, 9:20 PM IST

ಬೆಂಗಳೂರು: ಜನವರಿ 26 ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

  • ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ. ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ…

    — Siddaramaiah (@siddaramaiah) January 9, 2024 " class="align-text-top noRightClick twitterSection" data=" ">

ಎಕ್ಸ್ ಪೋಸ್ಟ್ ಮೂಲಕ ಅಸಮಾಧಾನ ಹೊರಹಾಕಿದ ಅವರು, ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು. ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ ಎಂದು ಕಿಡಿ ಕಾರಿದರು.

ನವಕರ್ನಾಟಕದ ಅಭಿವೃದ್ಧಿಯ ದೃಷ್ಠಾರ, ಸಾಮಾಜಿಕ ನ್ಯಾಯದ ಹರಿಕಾರ, ನೀರಾವರಿ, ಬ್ಯಾಂಕಿಂಗ್‌, ಮೂಲಸೌಕರ್ಯದ ಕ್ಷೇತ್ರಗಳ ಅಭಿವೃದ್ಧಿಯ ಮೂಲಕ ಮೈಸೂರನ್ನು ಒಂದು ಮಾದರಿ ರಾಜ್ಯವಾಗಿ ಕಟ್ಟಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಸ್ತಬ್ಧಚಿತ್ರ, ಕಿತ್ತೂರು ಚೆನ್ನಮ್ಮ, ಬ್ರಾಂಡ್ ಬೆಂಗಳೂರು ಹಾಗೂ ಕರ್ನಾಟಕದ ನೈಸರ್ಗಿಕ ವ್ಯವಸ್ಥೆ ಒಳಗೊಂಡಂತೆ 4 ಸ್ತಬ್ಧಚಿತ್ರ ಮಾದರಿಗಳಿಗೆ ಅವಕಾಶ ಕೋರಿ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಆದರೆ, ಕೇಂದ್ರದ ಆಯ್ಕೆ ಸಮಿತಿಯು ನಮ್ಮ ಮನವಿಯನ್ನು ತಿರಸ್ಕರಿಸಿ, ನಾಡಿನ ಅಸೀಮ ಸಾಧನೆ ಮತ್ತು ಮಾದರಿ ಸಾಧಕರನ್ನು ದೇಶಕ್ಕೆ ಪರಿಚಯಿಸುವ ಅವಕಾಶವನ್ನು ಕಸಿದುಕೊಂಡಿದೆ ಎಂದು ದೂರಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ತೆರಿಗೆ ಪಾಲಿನಲ್ಲಿ ವಂಚನೆ, ಬರ ಪರಿಹಾರದಲ್ಲಿ ಅನ್ಯಾಯ, ಕನ್ನಡಿಗರು ಕಟ್ಟಿರುವ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳ ಮಾರಾಟ ಹೀಗೆ ಹೆಜ್ಜೆಹೆಜ್ಜೆಗೂ ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶದಿಂದ ಪ್ರಹಾರ ಮಾಡುತ್ತಿದೆ. ಇದರ ಜೊತೆಗೆ ಈಗ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ರಾಜ್ಯಕ್ಕೆ ಅವಕಾಶ ನಿರಾಕರಿಸಿ ನಮ್ಮ ಅಸ್ಮಿತೆಯ ಮೇಲೆ ದಾಳಿಗೆ ಇಳಿದಿದೆ ಎಂದಿದ್ದಾರೆ.

ಕನ್ನಡ-ಕನ್ನಡಿಗ ಮತ್ತು ಕರ್ನಾಟಕಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದಿಂದ ಕನ್ನಡಿಗರು ಈಗಾಗಲೇ ರೋಸಿಹೋಗಿದ್ದಾರೆ. ಅವರ ತಾಳ್ಮೆ ಪರೀಕ್ಷಿಸಲು ಕೇಂದ್ರ ಸರ್ಕಾರ ಹೋಗಬಾರದು. ಈಗಲೂ ಕಾಲ ಮಿಂಚಿಲ್ಲ, ಕೇಂದ್ರ ಸರ್ಕಾರ ತಕ್ಷಣ ತನ್ನ ತಪ್ಪನ್ನು ತಿದ್ದಿಕೊಂಡು ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿಕೊಂಡು ದೇಶದ ಹೆಮ್ಮೆಯ ಗಣರಾಜ್ಯೋತ್ಸವ ಪರೇಡ್​​ನಲ್ಲಿ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ನಮಗೆ ಅವಕಾಶ ನೀಡಬೇಕು ಎಂದು ಸಿಎಂ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ನಾಳೆಯಿಂದ ಬಂಕ್​ಗಳಲ್ಲಿ ಪೆಟ್ರೋಲ್ ಡೀಸೆಲ್ ದರಪಟ್ಟಿ ಕನ್ನಡದಲ್ಲಿ ಪ್ರಕಟ: ಹರ್ದೀಪ್ ಸಿಂಗ್ ಪುರಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.